ಎಸ್ ಎಸ್ ಎಫ್ ಫರೀದ್ ನಗರ ಶಾಖಾ ಮಟ್ಟದ ಅಸ್ಸುಫ್ಫ ತರಗತಿ ಉದ್ಘಾಟನಾ ಸಮಾರಂಭಕ್ಕೆ ಶಾಖಾಧ್ಯಕ್ಷ ಎಚ್ ಇಸ್ಮಾಯಿಲ್ ರವರ ಅಧ್ಯಕ್ಷತೆಯಲ್ಲಿ ರಿಫಾಯಿ ಜುಮಾ ಮಸೀದಿಯ ಮುದರ್ರಿಸ್ ಶರಫುದ್ದೀನ್ ತಂಗಳ್ ಅಲ್ ಹೈದ್ರೋಸಿ ಇವರ ದುವಾ ದೊಂದಿಗೆ ಫರೀದ್ ನಗರ ಶಾಖಾ ಕಛೇರಿಯಲ್ಲಿ ಚಾಲನೆ ನೀಡಲಾಯಿತು.
ಖುವ್ವತುಲ್ ಇಸ್ಲಾಂ ಮದ್ರಸ ಇದರ ಮುಖ್ಯೋಪಾಧ್ಯಾಯರಾದ ಅಬ್ದುಲ್ ಹಮೀದ್ ಮದನಿ ಕಾರ್ಯಕ್ರಮ ಉದ್ಘಾಟಿಸಿದರು.ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಸಂಚಾಲಕ ಮುನೀರ್ ಕಾಮಿಲ್ ಸಖಾಫಿ ಉಳ್ಳಾಲ ಮುಖ್ಯ ಭಾಷಣ ಮಾಡಿ ಅಸ್ಸುಫ್ಫ ತರಗತಿಗೆ ಚಾಲನೆ ನೀಡಿದರು.
ಪ್ರಸ್ತುತ ಈ ಕಾರ್ಯಕ್ರಮದಲ್ಲಿ ಖುವ್ವತುಲ್ ಇಸ್ಲಾಂ ಮದರಸ ಪ್ರಾಧ್ಯಾಪಕರುಗಳಾದ ಇಸ್ಮಾಯಿಲ್ ಲತೀಫಿ,ಮಜೀದ್ ಬಾಅಸನಿ ರಿಫಾಯಿ ಜುಮಾ ಮಸೀದಿ ಅಧ್ಯಕ್ಷ ಬದ್ರುದ್ದೀನ್ ಫರೀದ್ ನಗರ,ಉಸ್ಮಾನಾಕ ಫರೀದ್ ನಗರ,ಹಾಜಿ ಮುಹಮ್ಮದ್ ಫರೀದ್ ನಗರ,ಶಾಹುಲ್ ಹಮೀದ್ ಫರೀದ್ ನಗರ,ಎಚ್ ಅಬೂಬಕರ್ ಫರೀದ್ ನಗರ,ಡಿ.ಕೆ ಮುಹಮ್ಮದ್ ಫರೀದ್ ನಗರ,ಕೋಣಾಜೆ ಸೆಕ್ಟರ್ ಉಪಾಧ್ಯಕ್ಷ ಜಲೀಲ್ ಮತ್ತು ವಿದ್ಯಾರ್ಥಿಗಳು ಹಾಗು ಮತ್ತಿತರರು ಉಪಸ್ಥಿತರಿದ್ದರು.ಎಸ್ಸೆಸ್ಸೆಫ್ ಫರೀದ್ ನಗರ ಶಾಖಾ ಕಾರ್ಯದರ್ಶಿ ಫೈಝಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಕೋಣಾಜೆ ಸೆಕ್ಟರ್ ಅಧ್ಯಕ್ಷ ಅಬ್ದುಲ್ ಮಜೀದ್ ಫರೀದ್ ನಗರ ಧನ್ಯವಾದಗೈದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment