Skip to main content

ಕೇವಲ 8 ತಿಂಗಳಲ್ಲಿ ಕುರ್ ಆನ್ ಕಂಠಪಾಠ ಮಾಡಿದ ಜಾಮಿಅಃ ಸಅದಿಯ್ಯಾದ ಹಿಫ್ಲ್ ಕಾಲೇಜಿನ 13 ರ ಬಾಲಕ!!

ಕೇವಲ 8 ತಿಂಗಳಲ್ಲಿ ಕುರ್ ಆನ್ ಕಂಠಪಾಠ ಮಾಡಿದ 13 ರ ಬಾಲಕ!!

ಆಟ, ಸಂಗೀತದ ಹಿಂದೆ ಬಿದ್ದು ಜೀವನ ವ್ಯರ್ಥಗೊಳಿಸುವ, ಲೌಕಿಕ ಪದವಿ ಗಳಿಕೆಗಾಗಿ ಧಾರ್ಮಿಕ ವಿದ್ಯೆಯನ್ನು ಕಡೆಗಣಿಸುವ ಎಲ್ಲಾ ಜನರ ಕಣ್ಣು ತೆರೆಸುವಂತಿದೆ ಮುಹಮ್ಮದ್ ರಾಫಿಯ ಸಾಧನೆ. ತನ್ನ ಹದಿಮೂರನೇ ಪ್ರಾಯದಲ್ಲಿ, ಅದೂ ಕೇವಲ 8 ತಿಂಗಳಲ್ಲಿ ಕುರ್ ಆನ್ ಸಂಪೂರ್ಣ ಕಂಠಪಾಠ ಮಾಡಿರುವ ಈತನ ಸಾಧನೆ ಸಣ್ಣದೇನಲ್ಲ..!
ದುಬೈ ಕೆ.ಸಿ.ಎಫ್ ನ ಸಕ್ರಿಯ ಕಾರ್ಯಕರ್ತ ಅಬ್ದುಲ್ಲ ಮುಸ್ಲಿಯಾರ್ ಕುಡ್ತಮುಗೇರುರವರ ಸಹೋದರ ಉಮರ್ ಹಾಗೂ ಕನ್ಯಾನ ಚೆಡವು ಶಾಫಿ ಸಅದಿಯವರ ಸಹೋದರಿ ಜಮೀಲಾ ದಂಪತಿಗಳ ಪುತ್ರನಾದ ಈತ  ಜಾಮಿಅಃ  ಸ ಅದಿಯಾ ಅರಬಿಯಾದ ಹಿಪ್ಲ್ ಕಾಲೇಜ್ ನ ವಿದ್ಯಾರ್ಥಿಯಾಗಿದ್ದಾನೆ. ಸುನ್ನೀವಾಣಿ ಹಾಗೂ ಸುನ್ನತ್ ಮಾಸಪತ್ರಿಕೆಯ ಸಂಪಾದಕರಾದ ಬಿ.ಕೆ ಯೂನುಸ್ ಇಮ್ದಾದಿ ಮಂಗಳಪದವು ರವರ ಫ್ಯಾಮಿಲಿಯ ಈ ಬಾಲಕನ ಸಾಧನೆಯಿಂದ ಇಡೀ ಕುಟುಂಬವೇ ಇಂದು ಸಂತಸದಲ್ಲಿದೆ.

ಸ್ವ ಇಚ್ಛೆಯಿಂದ ಕುರ್ ಆನ್ ಕಂಠಪಾಠ ಕಲಿಯಲು ಹೊರಟ ಮುಹಮ್ಮದ್ ರಾಫಿಯ ಸಾಧನೆಯನ್ನು ಕಂಡು ಸ್ವತಃ ಉಸ್ತಾದರೇ ನಿಬ್ಬೆರಗಾಗಿದ್ದಾರೆ.! ಇಂದು ಬೆಳಗ್ಗೆ ಸಅದಿಯಾದಲ್ಲಿ ನಡೆದ ಕುರ್ ಆನ್ ಖತಂ ಒಪ್ಪಿಸುವ ಕಾರ್ಯಕ್ರಮದಲ್ಲಿ ಆತನಿಗೆ ಕುರ್ ಆನ್ ಗ್ರಂಥ ನೀಡುವ ಮೂಲಕ ಉಸ್ತಾದರು ಆಶೀರ್ವದಿಸಿದರು.

"ಕುರ್ ಆನ್ ಕಲಿತು ಕಲಿಸುವವನು ನಿಮ್ಮ ಪೈಕಿ ಉತ್ತಮನು" ಎಂಬ ಪ್ರವಾದಿ ವಚನದಂತೆ ಕುರ್ ಆನ್ ಕಲಿಯಲು ಹೊರಟು, ಅತಿ ವೇಗವಾಗಿ ಕುರ್ ಆನ್ ಕಂಠಪಾಠ ಮಾಡಿ ಸಾಧನೆಗೈದ ಮುಹಮ್ಮದ್ ರಾಫಿ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾನೆ. ಅಲ್ಲಾಹು ಆತನಿಗೆ ಇನ್ನಷ್ಟು ಖೈರ್ ಗಳನ್ನು ನೀಡಲಿ. ನಮ್ಮ ಮಕ್ಕಳಿಗೂ ಉತ್ತಮ ನೆನಪಿನ ಶಕ್ತಿಯನ್ನು ಕರುಣಿಸಲಿ ಆಮೀನ್.


ಕಿರಿಯ ವಯಸ್ಸಿನಲ್ಲೇ ಅತೀ ಕಡಿಮೆ ಅವದಿಯಲ್ಲಿ ಪರಿಶುದ್ದ  ಕುರ್-ಆನ್ ಕಂಠಪಾಠ ಮಾಡಿ ನಮ್ಮೆಲ್ಲರ ಪ್ರೀತಿಗೆ ಪಾತ್ರನಾದ *ಮೊಹಮ್ಮದ್ ರಾಫಿ* ನಿನಗಿದೋ ಸಾವಿರ ಸಾವಿರ ಹೂ  ಚೆಂಡಿನ ಅಬಿನಂದನೆಗಳು ಕನ್ಯಾನ ಟೌನ್ ಮದ್ರಸ ಉಸ್ತಾದ್  ಅಬ್ದುಲ್ ಖಾದರ್ ಸಅದಿ ಉಸ್ತಾದ್ ಹತ್ತಿರ ಆರಂಭಿಕ ಮದರಸ ಶಿಕ್ಷಣ ಪಡೆದು ತನ್ನ  ಸ್ವಯ ಇಚ್ಚೆಯಿಂದ ಸಣ್ಣ ಪ್ರಾಯದಲ್ಲೇ ಕುರ್-ಆನ್ ಹಾಫಿಲ್ ಮಾಡಲು ಹೊರಟು  ಇದೀಗ ಅದರಲ್ಲಿ ಯಶಸ್ವಿಯಾದ ನಿನ್ನ ಮುಂದಿನ ಜೀವನ ಅಲ್ಲಾಹು ಉನ್ನತಿಯಿಂದ ಉನ್ನತಿಗೆ ಕೊಂಡೊಯ್ಯಲಿ ಎಂದು ಹಾರೈಸುವ...🌹🌹🌹

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.