Skip to main content

ಅಲ್ ಮದೀನತ್ತುಲ್ ಮುನವ್ವರ ಮೂಡಡ್ಕ  ಬುರೈದಾ ಘಟಕ ಅಸ್ತಿತ್ವಕ್ಕೆ  ಅಧ್ಯಕ್ಷರು ತಾಜುದ್ದೀನ್  ಕೆಮ್ಮಾರ,ಪ್ರ.ಕಾರ್ಯದರ್ಶಿಯಾಗಿ ಬಸೀರ್ ಸೂರಿಂಜೆ ಆಯ್ಕೆ





*ಅಲ್ ಮದೀನತ್ತುಲ್ ಮುನವ್ವರ ಮೂಡಡ್ಕ  ಬುರೈದಾ ಘಟಕ ಅಸ್ತಿತ್ವಕ್ಕೆ  ಅಧ್ಯಕ್ಷರು ತಾಜುದ್ದೀನ್  ಕೆಮ್ಮಾರ,ಪ್ರ.ಕಾರ್ಯದರ್ಶಿಯಾಗಿ ಬಸೀರ್ ಸೂರಿಂಜೆ ಆಯ್ಕೆ*

ಅಲ್ ಮದೀನತುಲ್ ಮುನವ್ವರ ವಿದ್ಯಾಸಂಸ್ಥೆ ಮೂಡಡ್ಕ ಇದರ ಸೌದಿ ಅರೇಬಿಯಾ ಪರ್ಯಟನೆ ಭಾಗವಾಗಿ ಮ್ಯಾನೇಜರ್ ಬಹು ಅಶ್ರಫ್ ಸಖಾಫಿ ಮಾಡಾವು ರವರ ಉಪಸ್ಥಿಯಲ್ಲಿ ಬುರೈದಾ ದಲ್ಲಿ ನೂತನ ಸಮಿತಿಯನ್ನು ರಚನೆ ಮಾಡಲಾಯಿತು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಖಾಫಿಯವರು ಮರ್ಹೂಮ್ ಟಿ.ಎಚ್ ಉಸ್ತಾದರು ಬೆಳ್ತಂಗಡಿ ತಾಲೂಕಿನಲ್ಲಿ ಮೊಟ್ಟ ಮೊದಲು
ಸ್ಥಾಪಿಸಿದ ಸಂಸ್ಥೆ, ಅವರ ಮರಣದ ನಂತರ ಸಾದಾತುಗಳ ಹಾಗೂ ಉಲಮಾಗಳ ನೇತ್ರತ್ವ ದಲ್ಲಿ ಬಹಳ ಅಭಿವರ್ದಿಯತ್ತ ಮುಂದು ವರಿಯುತ್ತಾ   7 ವಿದ್ಯಾರ್ಥಿಗಳಿಂದ ಆರಂಭಗೊಂಡಂತಹಾ ಸ್ಧಾಪನೆ ಈಗಾಗಲೇ 650 ಕ್ಕೂ ಮಿಕ್ಕ ವಿದ್ಯಾರ್ಥಿಗಳು ಧಾರ್ಮಿಕ ಮತ್ತು ಭೌತಿಕವಾಗಿ
ವಿದ್ಯೆ ಪಡೆಯುತ್ತಿದ್ದಾರೆ,
ಇದರ ಉನ್ನತಿಗೆ ಬೇಕಾಗಿ ಇನ್ನಷ್ಟು ಶ್ರಮಿಸಬೇಕು ಎಂದರು. 

*ನೂತನ ಪದಾಧಿಕಾರಿಗಳು*

ಅಧ್ಯಕ್ಷರು- ತಾಜದ್ದೀನ್ ಕೆಮ್ಮಾರ
ಪ್ರ.ಕಾರ್ಯದರ್ಶಿ-ಬಶೀರ್ ಸೂರಿಂಜೆ
ಕೋಶಾಧಿಕಾರಿ- ಸಲೀಂ ಕೆಮ್ಮಾರ
ಉಪಾಧ್ಯಕ್ಷರುಗಳು
ಇಬ್ರಾಹಿಂ ಅತೂರು ಕ್ಯೂಲಾ
ಝಕರಿಯ್ಯ ಹಾಸನ

ಜೊತೆ ಕಾರ್ಯದರ್ಶಿಗಳು
ಇಬ್ರಾಹಿಂ ಸರಳಿಕಟ್ಟೆ
ಪ್ಯೊಲಾ

ಸಲಹೆಗಾರರು- ಅಬ್ದುಲ್ಲ ಕಂಬಳಬೆಟ್ಟು ಕೋಲ್ಫ್
ಸಂಘಟನಾ ಕರ್ಯದರ್ಶಿ ಇರ್ಶಾದ್ ಸಚ್ಚಾರಿಪೇಟೆ

ಕಾರ್ಯಕಾರಿ ಸಮಿತಿ ಸದಸ್ಯರಾಗಿ
ಇಶ್ಹಾಕ್ ಬಾಅಸನಿ ಉಜಿರೆಬೆಟ್ಟು
ಅನ್ಸಾರ್ ಉರ್ಲಡ್ಕ ಸರಳಿಕಟ್ಟೆ
ಹನೀಫ್ ಸಚ್ಚಾರಿಪೇಟೆ
ರಫೀಖ್ ಬೈತಡ್ಕ
ಇಬ್ರಾಹೀಂ ಉಳ್ಳಾಲ
ಪಿ.ಯಸ್ ಹಮೀದ್ ಸರಳಿಕಟ್ಟೆ
ಶರೀಫ್ ನಾರ್ಶಾ

ವೇದಿಕೆಯಲ್ಲಿ ಅಲ್ ಮದೀನತುಲ್ ಮುನವ್ವರ ಉನೈಸ ಪ್ರದಾನಕಾರ್ಯದರ್ಶಿ  TK ಇಸ್ಮಾಯಿಲ್ ಮುಸ್ಲಿಯಾರ್ ನೀರಕಟ್ಟೆ ಮತ್ತು ಜೊತೆಕಾರ್ಯದರ್ಶಿ ಹೈದರ್ ಇನೋಲಿ ಉಪಸ್ಥಿತರಿದ್ದರು

ಕಾರ್ಯಕ್ರಮವನ್ನು ಸಂಸ್ಥೆಯ ಆರ್ಗಾನೈಝರ್ ಅಬ್ದುಲ್ ಕರೀಂ ಲತೀಫಿ ಬೇಂಗಿಲ ಸ್ವಾಗತಿಸಿ, ನೂತನ ಪ್ರಧಾನ ಕಾರ್ಯದರ್ಶಿ ಬಶೀರ್ ಸೂರಿಂಜೆ ಕೃತಜ್ಞತೆ ಸಲ್ಲಿಸಿದರು

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.