ಸಯ್ಯಿದ್ ಮದನಿ ಸುನ್ನಿ ಸೆಂಟ್ರಲ್ ಕಮಿಟಿ ಉಳ್ಳಾಲ ಇದರ ಆಶ್ರಯದಲ್ಲಿ ಮಜ್ಲಿಸು ತ್ವಯ್ಬಃ ಸಂಗಮ ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಅಧ್ಯಕ್ಷರಾದ ಅಬೂ ಅನಸ್ ಜಮಾಲ್ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಉಳ್ಳಾಲ ಆಝಾದ್ ನಗರದ ಸೆಂಟ್ರಲ್ ಕಮಿಟಿ ಕಛೇರಿ ಹಾಲ್ ನಲ್ಲಿ ನಡೆಯಿತು. ಎಸ್ ವೈ ಎಸ್ ಉಳ್ಳಾಲ ಸೆಂಟರ್ ಮಾಧ್ಯಮ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ದುವಾ ನೆರವೇರಿಸಿದರು. ಅಬೂ ಅನಸ್ ಜಮಾಲ್ ಉಸ್ತಾದ್ ಮಜ್ಲಿಸು ತ್ವಯ್ಬಃ ದ್ಸಿಕ್ರ್ ಮಜ್ಲಿಸಿನ ನೇತ್ರತ್ವ ವಹಿಸಿದರು. ಕಾರ್ಯಕ್ರಮದ ಕೊನೆಗೆ ಇಫ್ತಾರ್ ಕಿಟ್ ವಿತರಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಿರಾಜ್ ಉಸ್ತಾದ್ ಚಾಲಿಯಂ, ಸೆಂಟ್ರಲ್ ಕಮಿಟಿ ಉಪಾಧ್ಯಕ್ಷ ಕರೀಂ ಹಾಜಿ, ಎಸ್ ವೈ ಎಸ್ ಉಳ್ಳಾಲ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ, ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ, ಅಝೀಝ್ ಸೀರೋಡ್ ಕೋಡಿ, ಮುಸ್ತಫ ಟಿಂಬರ್, ಇಸ್ಮಾಯಿಲ್ ಮೇಲಂಗಡಿ, ಅಬ್ದುಲ್ಲತೀಫ್ ಅಕ್ಕರೆಕೆರೆ ಹಾಗು ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ ಕಾರ್ಯಕರ್ತರು ಭಾಗವಹಿಸಿದ್ದರು
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment