ಎಸ್ಸೆಸೆಫ್ ಕ್ಯಾಂಪಸ್ ಮಂಗಳೂರು ಡಿವಿಶನ್ ವತಿಯಿಂದ ಬೃಹತ್ ಇಫ್ತಾರ್ ಕೂಟ ಹಾಗೂ ಮೌಲಿದ್ ಪಾರಾಯಣ ದಿನಾಂಕ 8/6/2017 ರಂದು ಶಾಫಿ ಮಿಸ್ಬಾಹಿ ಇವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವಿಝ್ಬಮ್ ಹೋಮ್ ನಲ್ಲಿ ನಡೆಯಿತು. ಡಿವಿಶನ್ ಕ್ಯಾಂಪಸ್ ಚೆಯರ್ಮಾನ್ ಮಿಸ್ಬಾಹಿ ದುಆ ನೆರವೇರಿಸಿದರು.ನಂತರ ಬದರ್ ಮೌಲಿದ್ ಪಾರಾಯಣ ನಡೆಯಿತು.ಡಿವಿಶನ್ ಕಾರ್ಯದರ್ಶಿ ಗಝ್ಝಾಲಿ ಸ್ವಾಗತಿಸಿದರು. ವಿಝ್ಬಮ್ ಹೋಮ್ ಮಂಗಳೂರು ಇದರ ಮ್ಯಾನೇಜರ್ ಕಾಸಿಂ ಲತೀಫ್ ಕಾರ್ಯಕ್ರಮವನ್ನು ಉದ್ಘಾಟಿಸಿದರು . ಸೈಯದ್ ಮಿಹ್ರಾಜ್ ತಂಙಲ್ ಬದರ್ ಸ್ವಹಾಬಿಗಳು ಹಾಗೂ ಕ್ಯಾಂಪಸ್ ದ್ಅವಾ ವಿಷಯದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸೈಯದ್ ಸವಾದ್ ತಂಙಲ್ ದುಆ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದರು.
ಮಂಗಳೂರು ಡಿವಿಶನ್ ಉಪಾಧ್ಯಕ್ಷ ಸೈಯದ್ ಇಸ್ಹಾಕ್ ತಂಙಲ್ , ಡಿವಿಶನ್ ಪ್ರಧಾನ ಕಾರ್ಯದರ್ಶಿ ಜಬ್ಬಾರ್ ಕಣ್ಣೂರ್ , ಕ್ಯಾಂಪಸ್ ಪ್ರಧಾನ ಕಾರ್ಯದರ್ಶಿ ಹೈದರ್ ವಳವೂರ್ ಮುಂತಾದ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕೊನೆಗೆ ಹಾಮಿದ್ ರವರು ವಂದಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಲಾಯಿತು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment