ಉಳ್ಳಾಲ : ಪಟ್ಲ ತಖ್ವಾ ಜುಮಾ ಮಸೀದಿ ಹಾಗು ಖವ್ವತುಲ್ ಇಸ್ಲಾಂ ಮದ್ರಸ ಇದರ ಆಶ್ರಯದಲ್ಲಿ 71 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮದ್ರಸ ವಠಾರದಲ್ಲಿ ವಿಜ್ರಂಭಣೆಯಿಂದ ಆಚರಿಸಲಾಯಿತು.
ತಖ್ವಾ ಜುಮಾ ಮಸೀದಿ ಮುದರ್ರಿಸ್ ಅಲ್ ಹಾಜ್ ಅಬೂ ಮುಖ್ತಾರ್ ಸಖಾಫಿ ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಸೀದಿ ಅಧ್ಯಕ್ಷರಾದ ಮಹಮೂದ್ ಹಾಜಿ ಧ್ವಜಾರೋಹಣಗೈದರು. ಮದ್ರಸ ಮುಖ್ಯೋಪಾಧ್ಯರಾದ ಜಮಾಲ್ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮದ್ರಸ ಅಧ್ಯಾಪಕರಾದ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ಸ್ವಾತಂತ್ರ್ಯ ಸಂದೇಶ ಭಾಷಣ ಮಾಡಿ ದೇಶಪ್ರೇಮವು ಸತ್ಯ ವಿಶ್ವಾಸದ ಭಾಗವಾಗಿದೆ ಎಂಬ ಶಾಂತಿ ಸೌಹಾರ್ದತೆ, ಐಕ್ಯತೆಯನ್ನು ಬೋಧಿಸುವ ಮಹೋನ್ನತ ಸಂದೇಶವನ್ನು ಮಾನವಕುಲಕ್ಕೆ ನೀಡಿದ ಧರ್ಮವಾಗಿದೆ ಇಸ್ಲಾಂ ಅಂದರು. ಈ ಸಂದರ್ಭದಲ್ಲಿ ಖುವ್ವತುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಮದ್ರಸ ಅಧ್ಯಾಪಕರಾದ ಮುನೀರ್ ಲತೀಫಿ, ಮಸೀದಿಯ ಪ್ರಧಾನ ಕಾರ್ಯದರ್ಶಿ ಸದ್ದಾಂ, ಉಪಾಧ್ಯಕ್ಷರಾದ ಹಾರಿಸ್ ಹಾಗು ಮದ್ರಸ ವಿದ್ಯಾರ್ಥಿಗಳು, ಊರ ನಾಗರಿಕರು ಉಪಸ್ಥಿತರಿದ್ದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment