ಮಂಗಳೂರು: ಅಕ್ಷರ ಇ-ಮ್ಯಾಗಝಿನ್ ಪ್ರಧಾನ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಈಲ್‍ರವರ “ಮಳೆ ಹನಿ” ಪುಸ್ತಕ ಬಿಡುಗಡೆ ಸಮಾರಂಭ ಮಂಗಳೂರಿನ ಸರಕಾರಿ ರಾಜ್ಯ ನೌಕರರ ಭವನದಲ್ಲಿ ನಡೆಯಿತು.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊೈದಿನ್ ಬಾವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯ ಬಿ.ಎ. ಮುಹಮ್ಮದ್ ಅಲಿ ಕಮ್ಮರಡಿ ಅಧ್ಯಕ್ಷತೆ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ ದ.ಕ. ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್. ಎಂ. ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಲಹೆಗಾರ ರಫೀಕ್ ಮಾಸ್ಟರ್, ದಿನೇಶ್ ಹೊಳ್ಳ, ಡಿ.ಐ. ಅಬೂಬಕರ್ ಕೈರಂಗಳ, ಯಂಶ ಬೇಂಗಿಲ, ಆಶಿಕ್ ಕುಕ್ಕಾಜೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಮಾಜಿಕ ಕ್ಷೇತ್ರದ ಸಾಧನೆಗೆ ಹನೀಫ್ ಹಾಜಿ ಗೋಳ್ತಮಜಲುರವರನ್ನು ಹಾಗೂ ಕಲಾಕ್ಷೇತ್ರದ ಸಾಧನೆಗೆ ತಾರಾನಾಥ್ ಕೈರಂಗಳರವರನ್ನು ಸನ್ಮಾನಿಸಲಾಯಿತು. ಕವಿಗೋಷ್ಠಿ ಮತ್ತು ವ್ಯಕ್ತಿತ್ವ ವಿಕಸನ ತರಗತಿ ನಡೆಯಿತು.
ಅಕ್ಷರ ಪತ್ರಿಕೆಯ ಉಪ ಸಂಪಾದಕ ಎಂ.ಎಂ. ಮಅïರೂಫ್ ಆತೂರು ಕಾರ್ಯಕ್ರಮ ನಿರೂಪಿಸಿದರು, ವಿದ್ಯಾ ಟುಟೋರಿಯಲ್ ಸಂಚಾಲಕ ಕಬೀರ್ ಮಾಸ್ಟರ್ ವಂದಿಸಿದರು.
Comments
Post a Comment