ಎಸ್ ವೈ ಎಸ್ ಫರೀದ್ ನಗರ ಬ್ರಾಂಚ್ ಮಹಾಸಭೆ ಹಾಗು ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ಫರೀದ್ ನಗರ ರಿಫಾಯಿಯ್ಯಃ ಜುಮಾ ಮಸೀದಿ ಮುದರ್ರಿಸರಾದ ಸಯ್ಯಿದ್ ಶರಫುದ್ದೀನ್ ತಂಗಳ್ ಅಲ್ ಹೈದ್ರೋಸ್ ಇವರ ಅಧ್ಯಕ್ಷತೆಯಲ್ಲಿ ಫರೀದ್ ನಗರದ ಎಸ್ಸೆಸ್ಸೆಫ್, ಎಸ್ ವೈ ಎಸ್ ಕಛೇರಿಯಲ್ಲಿ ಜರುಗಿತು.
ಇಸಾಕ್ ಝುಹ್ರಿ ಕಾನಕೆರೆ ಸಭೆಯನ್ನು ಉದ್ಘಾಟಿಸಿದರು. ರಾಜ್ಯ ಎಸ್ ವೈ ಎಸ್ ನಾಯಕರಾದ ಜಿ. ಎಂ ಕಾಮಿಲ್ ಸಖಾಫಿ ಅಧ್ಯಯನ ತರಗತಿ ನಡೆಸಿದರು.
ಅಬ್ದುಲ್ ಮಜೀದ್ ಫರೀದ್ ನಗರ ಸ್ವಾಗತಿಸಿದರು. ಬಳಿಕ ಎಸ್ ವೈ ಎಸ್ ಫರೀದ್ ನಗರ ಬ್ರಾಂಚಿಗೆ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಅಧ್ಯಕ್ಷರಾಗಿ ಶಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಇಸ್ಮಾಯಿಲ್ ಎಚ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಮಜೀದ್, ಜೊತೆ ಕಾರ್ಯದರ್ಶಿಯಾಗಿ ಆಸಿಫ್ ಬಿ. ಎಚ್, ಕೋಶಾಧಿಕಾರಿಯಾಗಿ ಉಸ್ಮಾನ್ ಬಿ ಹಾಗು ಹಾಜರಿದ್ದವರಲ್ಲಿ ಹದಿಮೂರು ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.
ಚುನಾವಣಾ ವೀಕ್ಷಕರಾಗಿ ಎಸ್ ವೈ ಎಸ್ ಹರೇಕಳ ಸೆಂಟರ್ ಅಧ್ಯಕ್ಷ ಅಬ್ದುಲ್ ರಝ್ಝಾಖ್ ಆಲಡ್ಕ ಹಾಗು ಪ್ರಧಾನ ಕಾರ್ಯದರ್ಶಿ ಕಾಸಿಂ ಬೈತಾರ್ ಆಗಮಿಸಿದ್ದರು.
ಪ್ರಸ್ತುತ ಸಭೆಯಲ್ಲಿ ಆರ್ ಜೆ ಎಂ ಫರೀದ್ ನಗರ ಮಸೀದಿ ಅಧ್ಯಕ್ಷರಾದ ಬದ್ರುದ್ದೀನ್, ಮದ್ರಸ ಪ್ರಾಧ್ಯಾಪಕರುಗಳು ಹಾಗು ಎಸ್ಸೆಸ್ಸೆಫ್ ಎಸ್ ವೈ ಎಸ್ ಫರೀದ್ ನಗರ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ನೌಫಲ್ ಫರೀದ್ ನಗರ ಧನ್ಯವಾದಗೈದರು. ನೂತನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಸಭೆಗೆ ಆಗಮಿಸಿ ಸಹಕರಿಸಿದ ಸರ್ವರಿಗೂ ಅಭಿನಂದನೆಗಳನ್ನು ಪ್ರಕಟನೆಯಲ್ಲಿ ತಿಳಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment