ಉಳ್ಳಾಲ : ಮದ್ರಸ ಕಾರ್ಯಕ್ಷೇತ್ರವನ್ನು ಅಭಿವ್ರದ್ಧಿಗೊಳಿಸುವ ನಿಟ್ಟಿನಲ್ಲಿ ಮತ್ತು ಧಾರ್ಮಿಕ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ಸಲುವಾಗಿ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಅಧೀನ ಮೊಹಲ್ಲಾಗಳ ಮದ್ರಸ ಮಸೀದಿ ಉಸ್ತಾದರುಗಳ ನೇತ್ರತ್ವದಲ್ಲಿ ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ಸಂಘಟನೆಗೆ ಚಾಲನೆ ನೀಡಲಾಯಿತು.
ಉಳ್ಳಾಲ ಮಂಚಿಲದ ಬದ್ರ್ ಆಡಿಟೋರಿಯಂ ನಲ್ಲಿ ನಡೆದ ಸಭೆಯಲ್ಲಿ ಅಲ್ ಹಾಜ್ ಅಬೂ ಮುಖ್ತಾರ್ ಸಖಾಫಿ ಪ್ರಾರ್ಥನೆ ನೆರವೇರಿಸಿದರು. ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಪ್ರಧಾನ ಕಾರ್ಯದರ್ಶಿ ಹಮೀದ್ ಮಂಚಿಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಪ್ರಭಾಷಣ ಮಾಡಿದ ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಅಧ್ಯಕ್ಷರಾದ ಪಿ. ಎಸ್. ಎಂ ಶಿಹಾಬುದ್ದೀನ್ ಸಖಾಫಿ ಮದ್ರಸ ಎಂಬುದು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ವ್ಯವಸ್ಥೆಯಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯೆಯನ್ನು ನೀಡಲು ಪೂರಕವಾಗುವ ವಾತಾವರಣವನ್ನು ನಿರ್ಮಿಸುವುದು ಅನಿವಾರ್ಯವಾಗಿದೆ. ಪವಿತ್ರ ಅಹ್ಲುಸ್ಸುನ್ನತಿ ವಲ್ ಜಮಾಅತಿನ ಆಶಯಾದರ್ಶಗಳಿಗೆ ಚ್ಯುತಿ ಬಾರದಂತೆ ಕಾಪಾಡುವ ಮತ್ತು ಮದ್ರಸ ಕ್ಷೇತ್ರವನ್ನು ಇನ್ನಷ್ಟು ಅಭಿವ್ರದ್ಧಿಗೊಳಿಸುವ ಹೊಣೆಗಾರಿಕೆ ಮದ್ರಸ ಉಸ್ತಾದರುಗಳ ಮೇಲಿದೆ ಎಂದು ತಿಳಿಸಿದರು. ಉಳ್ಳಾಲ ನಗರ ಸಭಾ ಸದಸ್ಯರಾದ ಫಾರೂಖ್ ಹಳೆಕೋಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಹಾಫಿಝ್ ಹಸನ್ ಮುಬಾರಕ್ ಸಖಾಫಿ, ಪ್ರಧಾನ ಕಾರ್ಯದರ್ಶಿಯಾಗಿ ಅಬೂ ಶಮ್ಮಾಝ್ ಉಸ್ತಾದ್, ಕೋಶಾಧಿಕಾರಿಯಾಗಿ ಮಳಹರಿ ಉಸ್ತಾದ್, ಸಂಚಾಲಕರಾಗಿ ಯೂಸುಫ್ ಉಸ್ತಾದ್, ಉಪಾಧ್ಯಕ್ಷರಾಗಿ ಖಾಲಿದ್ ಮದನಿ, ಜಮಾಲ್ ಮುಸ್ಲಿಯಾರ್, ಜೊತೆ ಕಾರ್ಯದರ್ಶಿಯಾಗಿ ಅಬೂ ಫಝಲ್ ಸಖಾಫಿ, ಉಸ್ಮಾನ್ ಮುಸ್ಲಿಯಾರ್ ಹಾಗು ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಇದರ ಅಧೀನ ಮೊಹಲ್ಲಾಗಳ ಮುಖ್ಯೋಪಾಧ್ಯಾಯರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.
ಈ ಸಂದರ್ಭದಲ್ಲಿ ಅಳೇಕಲ ಮೊಹಲ್ಲಾ ಪ್ರಧಾನ ಕಾರ್ಯದರ್ಶಿ ಯು ಡಿ ಅಶ್ರಫ್, ಬದ್ರುದ್ದೀನ್ ಹಾಜಿ, ಮನ್ಸೂರ್ ದಾರಂದಬಾಗಿಲು ಹಾಗು ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟದ ಅಧೀನ ಮೊಹಲ್ಲಾಗಳ ಸಮಿತಿ ಪದಾಧಿಕಾರಿಗಳು, ಉಸ್ತಾದರುಗಳು ಉಪಸ್ಥಿತರಿದ್ದರು. ಅಶ್ರಫ್ ಸುಳ್ಯ ಉಳ್ಳಾಲ ಸ್ವಾಗತಿಸಿ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ಧನ್ಯವಾದಗೈದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment