Skip to main content

ಎಸ್ಸೆಸ್ಸೆಪ್ ಬ್ರಹ್ಮಾವರ ಸೆಕ್ಟರ್ ಸ್ವಾತಂತ್ರ್ಯ ಸಂದೇಶ ಕಾರ್ಯಕ್ರಮ


ಬ್ರಹ್ಮಾವರ : ಈ ದೇಶದ ಸರ್ವ ಜನರು ಜಾತಿ, ಮತ, ಬೇದ ರಹಿತವಾಗಿ ಒಗ್ಗೂಡಿದರೆ ಈ ದೇಶದ ಒಂದು ಹಿಂಡು ಭೂಮಿಯನ್ನು ಕದಲುಸಲು ಯಾರಿಂದಲೂ ಸಾಧ್ಯವಿಲ್ಲ ಎಂದು  71 ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಎಸ್ಸೆಸ್ಸೆಪ್ ಬ್ರಹ್ಮಾವರ ಸೆಕ್ಟರ್ ವತಿಯಿಂದ ಹೊನ್ನಾಳ ಬಸ್ ನಿಲ್ದಾಣ ಬಳಿ ನಡೆದ "ಸ್ವಾತಂತ್ರ್ಯ ಸಂದೇಶ ಭಾಷಣ" ಕಾರ್ಯಕ್ರಮದಲ್ಲಿ ಮುಖ್ಯ ಸಂದೇಶ ಭಾಷಣ ಮಾಡಿದ ಎಸ್ಸೆಸ್ಸೆಪ್ ಉಡುಪಿ ಜಿಲ್ಲ್ಲಾ ಅಧ್ಯಕ್ಷರಾದ ಅಶ್ರಫ್ ರಝಾ ಅಂಜದಿ ಇವರು ಮಾತನಾಡಿದರು.ಎಲ್ಲಿಯವರೆಗೆ ನಮ್ಮೊಳಗೆ ನಾವುಗಳು ಎಂದು ಮನೋಭಾವನೆ ಬಿಟ್ಟು ನಾನು ಎಂಬ ಭಾವನೆ ಇರುತ್ತೊ ಅಲ್ಲಿಯವರೆಗು ಪ್ರಗತಿ ಸಾದಿಸಲು ಆಗುವುದಿಲ್ಲ, ಇದು ವಿನಾಶಕ್ಕೆ ಕಾರಣವಾಗುತ್ತೆ ಎಂದು ಇನ್ನೊರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಪತ್ರಿಕೋದ್ಯಮ ಪ್ರಾದ್ಯಪಕರಾದ ಮಂಜಪ್ಪ ಡಿ.ಗೋನಿ ಇವರು ತಿಳಿಸಿದರು.ಬ್ರಹ್ಮಾವರ ಸೆಕ್ಟರ್ ಅಧ್ಯಕ್ಷ ಇಮ್ತಿಯಾಝ್ ಹೊನ್ನಾಳ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವು, ಎಸ್ ವೈ ಎಸ್ ರಾಜ್ಯ ಸದಸ್ಯ ಅಡ್ವಕೇಟ್ ಹಂಝತ್ ಹೆಜಮಾಡಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಎಸ್ಸೆಸ್ಸೆಪ್ ಉಡುಪಿ ಡಿವಿಷನ್ ಅಧ್ಯಕ್ಷ ಅಬ್ದುರ್ರಹ್ಮಾನ್ ಸಹದಿ,ಜಾಮಿಯ ಮಸೀದಿ ಹೊನ್ನಾಳ ಅಧ್ಯಕ್ಷರಾದ ಇಮಾಮ್ ಸಾಹೆಬ್,ಉದ್ಯಮಿಯಾದ ಮುಸ್ತಾಕ್ ಅಹಮದ್,ರಿಲೀಪ್ ಸೆಲ್ ಅಧ್ಯಕ್ಷರಾದ ರಝಾಕ್ ಉಸ್ತಾದ್, ಸೆಕ್ಟರ್ ಉಸ್ತುವಾರಿ ಶಾಹುಲ್ ದೊಡ್ಡಣಗುಡ್ಡೆ, ಸೆಕ್ಟರ್ ಕೋಶಾಧಿಕಾರಿ ಸುಲೈಮಾನ್ ರಂಗನಕೆರೆ,ಡಿವಿಷನ್ ಪ್ರ.ಕಾರ್ಯದರ್ಶಿ ನಝೀರ್ ಸಾಸ್ತಾನ, ಶಂಶುದ್ದೀನ್,ಸುಹೈಬ್, ಅಶ್ರಫ್ ಬೈಕಾಡಿ,ಇಬ್ರಾಹಿಂ ಆರ್ ಕೆ,ರಪೀಕ್,ನವಾಝ್ ಮಣಿಪುರ ಉಪಸ್ಥಿತಿತರಿದ್ದರು.ಸೆಕ್ಟರ್ ಗವರವ ಸಲಹೆಗಾರರಾದ ಸುಬುಹಾನ್ ಹೊನ್ನಾಳ  ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸೆಕ್ಟರ್ ಕಾರ್ಯದರ್ಶಿ ನಾಸೀರ್ ಭದ್ರಗಿರಿ ವಂದಿಸಿದರು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.