ಪಡುಬಿದ್ರಿ; ಮುಹಿಯ್ಯುದ್ದೀನ್ ಜುಮಾ ಮಸ್ಜಿದ್ ಪಡುಬಿದ್ರಿ ಹಾಗೂ ಎಸ್ಸೆಸ್ಸೆಫ್ ಪಡುಬಿದ್ರಿ ಶಾಖೆ ವತಿಯಿಂದ 71ನೇ ಸ್ವಾತಂತ್ರ್ಯೋತ್ಸವ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ ಕಂಚಿನಡ್ಕ ಮಸ್ಜಿದ್ ವಠಾರದಲ್ಲಿ ನಡೆಯಿತು.
ಪಡುಬಿದ್ರಿ ಮಸ್ಜಿದ್ ಖತೀಬ್ ಅಲ್ಹಾಜ್ ಎಸ್.ಎಂ. ಅಬ್ದುರ್ರಹ್ಮಾನ್ ಮದನಿ ಪ್ರಾರ್ಥನೆ ನಡೆಸಿದರು. ಪಡುಬಿದ್ರಿ ಮಸ್ಜಿದ್ ಅಧ್ಯಕ್ಷ ಹಾಜಿ ಪಿ.ಎ. ಅಬ್ದುರ್ರಹ್ಮಾನ್ ಧ್ವಜಾರೋಹಣ ಗೈದರು. ಎಸ್ಸೆಸ್ಸೆಫ್ ಕಾಪು ಡಿವಿಷನ್ ಎಸ್.ಬಿ.ಎಸ್. ಚಯರ್'ಮ್ಯಾನ್ ಎಂ.ಎಚ್.ಎಂ. ಕಲಂದರ್ ರಝ್ವಿ ಬೆಜ್ಜವಳ್ಳಿ ಸಂದೇಶ ಭಾಷಣ ಮಾಡಿದರು.
ಕಂಚಿನಡ್ಕ ಮಸ್ಜಿದ್ ಖತೀಬ್ ಅಬ್ದುಲ್ ಲತೀಫ್ ಮದನಿ, ನೂರುಲ್ ಹುದಾ ಮದ್'ರಸ ಪಡುಬಿದ್ರಿ & ಕಂಚಿನಡ್ಕ ಸದರ್ ಮುಅಲ್ಲಿಮ್ ಅಶ್ರಫ್ ಸಅದಿ, ಎಸ್ಸೆಸ್ಸೆಫ್ ಪಡುಬಿದ್ರಿ ಶಾಖೆ ಗೌರವಾಧ್ಯಕ್ಷ ಪಿ.ಎಂ.ಎಸ್. ಸಿದ್ದೀಖ್ ಮುಸ್ಲಿಯಾರ್, ಎಸ್ಸೆಸ್ಸೆಫ್ ಪಡುಬಿದ್ರಿ ಶಾಖೆ ಅಧ್ಯಕ್ಷ ನಿಯಾಝ್ ದೀನ್'ಸ್ಟ್ರೀಟ್, ಮಸ್ಜಿದ್ ಪ್ರ.ಕಾರ್ಯದರ್ಶಿ ಶೇಖ್ ಇಸ್ಮಾಯಿಲ್ ಮಾಸ್ಟರ್, ಎಸ್ಸೆಸ್ಸೆಫ್ ಪಡುಬಿದ್ರಿ ಮಾಜಿ ಅಧ್ಯಕ್ಷ ಶಂಸುದ್ದೀನ್ ಸಅದಿ ಮುಖ್ಯ ಅತಿಥಿಗಳಾಗಿ ಹಾಜರಿದ್ದರು.
ಜಮಾಅತಿಗರು, ಮದ್ರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಮೀದ್ ಮದನಿ ಮಾಣಿ, ಅಶ್ರಫ್ ಸಅದಿ ಕಡಬ ಕಾರ್ಯಕ್ರಮ ನಿರೂಪಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment