SSF ವಿಟ್ಲ ಸೌತ್ ಸೆಕ್ಟರ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಉಕ್ಕುಡದ ತಾಜುಲ್ ಉಲಮಾ ಮಹಿಳಾ ಶರೀಅತ್ ಕಾಲೇಜು ಆವರಣದಲ್ಲಿ ಆಚರಿಸಲಾಯಿತು.
ಮರ್ಕಝುಲ್ ಹುದಾ ಮಹಿಳಾ ಕಾಲೇಜು ಕುಂಬ್ರ ಪ್ರೊಫೆಸರ್ ಉಸ್ತಾದ್ ಜಲೀಲ್ ಸಖಾಫಿ ಧ್ವಜಾರೋಹಣ ನಡೆಸಿ ಸ್ವಾತಂತ್ರ್ಯ ಸಂದೇಶ ನೀಡಿದರು..ಕಾರ್ಯಕ್ರಮದ ಅಧ್ಯಕ್ಷತೆಯನ್ನು SSF ವಿಟ್ಲ ಸೌತ್ ಸೆಕ್ಟರ್ ಅಧ್ಯಕ್ಷರಾದ ಮುಈನುದ್ದೀನ್ ಮದನಿ ಪುಣಚ ವಹಿಸಿದ್ದರು.ತಾಜುಲ್ ಉಲಮಾ ಶರೀಅತ್ ಕಾಲೇಜು ಜ.ಮೆನೇಜರ್ ಅಬ್ದುರ್ರಹ್ಮಾನ್ ಶರಫಿ ಮೂಡಂಬೈಲು ಕಾರ್ಯಕ್ರಮವನ್ನು ನಿರೂಪಿಸಿದರು.ಮುಖ್ಯ ಅತಿಥಿಗಳಾಗಿ ಎಂ.ಕೆ.ಎಂ.ಕಾಮಿಲ್ ಸಖಾಫಿ ಕೊಡಂಗಾಯಿ,ರಹೀಂ ಸಖಾಫಿ ವಿಟ್ಲ, ಶರೀಫ್ ಉಕ್ಕುಡ, ಸಲೀಂ ಹಾಜಿ ಬೈರಿಕಟ್ಟೆ,ಅಬ್ದುರ್ರಝಾಕ್ ಪೆಲ್ತಡ್ಕ,ಹೈದರ್ ಅಳಕೆಮಜಲು,ರಫೀಕ್ ಮರಕ್ಕಿಣಿ, ಸಿ.ಹೆಚ್.ಅಬ್ದುಲ್ ಖಾದರ್,ಕೆ.ಸಿ.ಎಫ್ ನಾಯಕರಾದ ಹಮೀದ್ ಅಳಿಕೆ,ಮೊಯ್ದಿನ್ ಕುಂಞಿ ನೆಗಳಗುಳಿ ಮತ್ತಿತರರು ಉಪಸ್ಥಿತರಿದ್ದರು. ಕ್ಯಾಂಪಸ್ ಕಾರ್ಯದರ್ಶಿ ತಮೀಮ್ ಸ್ವಾಗತಿಸಿ, ಸೆಕ್ಟರ್ ಪ್ರ.ಕಾರ್ಯದರ್ಶಿ ಜಹಾಝ್ ಅಳಿಕೆ ವಂದಿಸಿದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment