Skip to main content

ತ್ರಿವಳಿ ತಲಾಖ್ ಒಂದೇ ಬಾರಿ ಹೇಳಿದರೆ ಸಿಂಧುವಾಗುತ್ತದೆ - ಬೇಕಲ ಉಸ್ತಾದ್

*ಮಂಗಳೂರು.* ಒಂದೇ ಬಾರಿ ತ್ರಿವಳಿ ತಲಾಖ್ ಹೇಳಿದರೆ ಇಸ್ಲಾಂ ಧರ್ಮದ ಪ್ರಮಾಣಗಳ ಪ್ರಕಾರ ಸಿಂಧುವಾಗುತ್ತಿದ್ದು ಆದರೆ ಇಸ್ಲಾಂ ಧರ್ಮ ತಲಾಖ್ ಹೇಳುವುದಕ್ಕೆ ಪ್ರೋತ್ಸಾಹ ನೀಡಿಲ್ಲ ಎಂದು ಕರ್ನಾಟಕ ರಾಜ್ಯ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ ಹೇಳಿದ್ದಾರೆ

ಎಸ್ ಜೆ ಯು ರಾಜ್ಯ ಸಮಿತಿ ಮಂಗಳೂರು ಪುರಭವನದಲ್ಲಿ ಹಮ್ಮಿಕೊಂಡ ತ್ರಿವಳಿ  ತಲಾಖ್ ಮಾಹಿತಿ ಶಿಬಿರದಲ್ಲಿ ವಿಷಯ ಮಂಡನೆ ಮಾಡಿ ಅವರು ಮಾತನಾಡುತ್ತಿದ್ದರು.
ಯಾರೋ ಅಲ್ಪ ಜ್ಞಾನಿಗಳು ತಲಾಖ್ ದುರುಪಯೋಗ ಪಡಿಸಿಕೊಳ್ಳುವ ಕಾರಣ ತಲಾಖ್ ಎನ್ನುವುದು ಒಂದು ಸಮಸ್ಯೆಯಂತೆ ಬಿಂಬಿಸಲ್ಪಡುತ್ತಿದೆ.
ನಿಜವಾಗಿ ಗಂಡು - ಹೆಣ್ಣು ದಾಂಪತ್ಯ ಜೀವನ ಯಾವ ಕಾರಣಕ್ಕೂ ಮುಂದುವರಿಸಲು ಸಾಧ್ಯವಿಲ್ಲವೆನ್ನುವ ಹಂತ ತಲುಪಿದಾಗ ಕೆಲವು ನಿಬಂಧನೆಗಳ ಮೂಲಕ ತಲಾಖ್ ಹೇಳುವುದಕ್ಕೆ ಪ್ರಪಂಚ ಸೃಷ್ಟಿಕರ್ತ ಅಲ್ಲಾಹು ಸ್ಥಾಪಿಸಿದ ಇಸ್ಲಾಂ ಧರ್ಮ ಅನುಮತಿ ನೀಡಿದೆ.ಇದನ್ನು‌ ಪ್ರಶ್ನಿಸುವುದು ಅಥವಾ ತಲಾಖ್ ಇಸ್ಲಾಂ ಧರ್ಮ ದಲ್ಲಿ ಇಲ್ಲ ಎಂದು ಹೇಳುವುದು ಧರ್ಮ ಧಿಕ್ಕಾರ ಪ್ರವೃತ್ತಿಯಾಗಿದೆ.
ಇಸ್ಲಾಂ ಧರ್ಮದ ಬಾಲ ಪಾಠವನ್ನು ಕೂಡ ತಿಳಿಯದ ಕೆಲವು ಅವಿವೇಕಿಗಳು ತಲಾಖ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.
ತಲಾಖ್ ,ಬಹುಪತ್ನಿತ್ವ  ಮೊದಲಾದ ಸೂಕ್ಷ್ಮ ವಿಚಾರಗಳ ಬಗ್ಗೆ  ಸರಕಾರ, ನ್ಯಾಯಾಲಯಗಳು ಯಾವುದೇ ತೀರ್ಮಾನ ಹೇಳುವಂತಿಲ್ಲ.
ಧಾರ್ಮಿಕ ವಿಧಿ ವಿಧಾನಗಳು ಮುಸ್ಲಿಂ ವಿದ್ವಾಂಸರು ಇಸ್ಲಾಂ ಧರ್ಮದ ಪ್ರಮಾಣ ಗ್ರಂಥಗಳ ಆಧಾರದಲ್ಲಿ ತೀರ್ಮಾನಿಸುವಂಥದ್ದಾಗಿದೆ.
ಮಾನವ ಸಮುದಾಯದ ಇಹ ಪರ ವಿಜಯಕ್ಕಾಗಿ ಸೃಷ್ಟಿಕರ್ತ ಅಲ್ಲಾಹು ಸ್ಥಾಪಿಸಿದ ಇಸ್ಲಾಂ ಎಂಬ  ಪ್ರಕೃತಿ ಧರ್ಮದ ತತ್ವ ಸಿದ್ದಾಂತಗಳು ಕಾಲಕಾಲಕ್ಕೆ ಬದಲಾಗುವಂಥದ್ದಲ್ಲ ಎಂದು ಬೇಕಲ ಉಸ್ತಾದ್ ಮಾರ್ಮಿಕವಾಗಿ ನುಡಿದರು.

ವರದಿ: ಪುಣಚ ಝುಹ್ ರಿ

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.