Skip to main content

*ಐತಿಹಾಸಿಕವಾಗಿ ಮೂಡಿಬರಲಿರುವ ತಲಾಖ್ ಕುರಿತಾದ ಎರಡು ವಿವರಣಾ ಸಮಾವೇಶಗಳು* ✍ *ಕೆ ಎ ಅಬ್ದುಲ್ ಅಝೀಝ್ ಝುಹ್ರಿ ಪುಣಚ*

ದ.ಕ.ಜಿಲ್ಲಾ ಸುನ್ನೀ ಜಂಇಯ್ಯತುಲ್ ಉಲಮಾ ವತಿಯಿಂದ ಸೆಪ್ಟೆಂಬರ್ 9 ನೇ ತಾರೀಖಿನಂದು ಶನಿವಾರ ಪೂರ್ವಾಹ್ನ 10 ಗಂಟೆಗೆ ಮಂಗಳೂರು ಹಂಪನಕಟ್ಟೆ ಹೋಟೆಲ್ ಸೂರ್ಯ ದಲ್ಲಿ ನಡೆಯಲಿರುವ ತಲಾಖ್ ವಿವರಣಾ ಸಮಾವೇಶ ಮತ್ತು ಸ್ನೇಹ ಸಂವಾದ ಹಾಗೂ ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಸೆಪ್ಟೆಂಬರ್ 14 ಗುರುವಾರ ಪೂರ್ವಾಹ್ನ ಮಂಗಳೂರು ಪುರ ಭವನದಲ್ಲಿ ಹಮ್ಮಿಕೊಂಡಿರುವ ತ್ರಿವಳಿ ತಲಾಖ್ ನ ಕುರಿತಾದ  ವಿವರಣಾ ಸಮಾವೇಶ, ತಲಾಖ್ ಕುರಿತು ತಪ್ಪು ಕಲ್ಪನೆ ಇಟ್ಟುಕೊಂಡವರಿಗೆ ತಮ್ಮ ತಪ್ಪು ಕಲ್ಪನೆಗಳನ್ನು ದೂರ ಮಾಡಲಿರುವ ಒಂದು ಸುವರ್ಣಾವಕಾಶ ವಾಗಿದೆ.

*ಇಸ್ಲಾಂ ಧರ್ಮ ಅಲ್ಲಾಹು ನಿರ್ಮಿಸಿದ ಪ್ರಕೃತಿ ಧರ್ಮವಾಗಿದ್ದು ಇಸ್ಲಾಮಿನ ಪ್ರತಿಯೊಂದು ನಿಯಮಗಳು ಕೂಡ ಸೃಷ್ಟಿಕರ್ತ ಅಲ್ಲಾಹು ರೂಪಿಸಿರುವ ನಿಯಮಗಳಾಗಿವೆ.*

*ಇಸ್ಲಾಂ ಧರ್ಮದ ಬಗ್ಗೆ ಮತ್ತು ಇಸ್ಲಾಂ ಧರ್ಮದ ಇತಿಹಾಸದ ಬಗ್ಗೆ ಜ್ಞಾನವಿಲ್ಲದವರು ಇಸ್ಲಾಮನ್ನು ಇತರ ಸಂಸ್ಕೃತಿ ಗಳಂತೆ ಕಾಣುತ್ತಿರುವುದರಿಂದ ಮುಸ್ಲಿಮೇತರ ಸಮುದಾಯದವರಿಗೆ ಇಸ್ಲಾಮಿನ ಬಗ್ಗೆ ಹಲವಾರು ತಪ್ಪು ಕಲ್ಪನೆ ಗಳು ಮೂಡಲು ಕಾರಣವಾಗಿದೆ.*

*ಇಸ್ಲಾಂ ಧರ್ಮ ಒಂದು ತೆರೆದ ಪುಸ್ತಕವಾಗಿದ್ದು ಅದನ್ನು ಅಧ್ಯಯನ ನಡೆಸುವ ಯಾರೊಬ್ಬರಿಗೂ ಸತ್ಯ ದರ್ಶನವಾಗದೇ ಇರದು.*

*ಕರ್ನಾಟಕದ ಉಲಮಾ ನಾಯಕರು ತಲಾಖ್ ಬಗ್ಗೆ ಸಮಗ್ರ ವಿವರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ನಿಜಕ್ಕೂ ಸಕಾಲಿಕ ವಾಗಿದೆ.*

*ದ.ಕ.ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಅಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ಶೈಖುನಾ ಪಿ.ಎಂ.ಇಬ್ರಾಹಿಂ ಮುಸ್ಲಿಯಾರ್ ಬೇಕಲ ಅವರಿಂದ ಮಲಯಾಳಂ ಭಾಷೆಯಲ್ಲಿ ನಡೆಯಲಿರುವ ತಲಾಖ್ ಕುರಿತಾದ ಸೆಮಿನಾರ್ ಮತ್ತು ದ.ಕ.ಜಿಲ್ಲಾ ಸುನ್ನೀ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಟಿ.ಎಂ.ಮುಹ್ಯದ್ದೀನ್ ಕಾಮಿಲ್ ಸಖಾಫಿ ತೋಕೆ ಅವರಿಂದ ಹಂಪನಕಟ್ಟೆ ಹೋಟೆಲ್ ಸೂರ್ಯದಲ್ಲಿ  ಕನ್ನಡ ಭಾಷೆಯಲ್ಲಿ ನಡೆಯಲಿರುವ ಸೆಮಿನಾರ್ ಒಂದು ಹೊಸ ಇತಿಹಾಸಕ್ಕೆ ಮುನ್ನುಡಿ ಬರೆಯಲಿದೆ.*

*ಇತ್ತೀಚೆಗಷ್ಟೇ ಅಸ್ತಿತ್ವಕ್ಕೆ ಬಂದ ಸುನ್ನೀ ಸಾಹಿತ್ಯ ಮಂಡಳಿ ( ಸುಸಾಮ ) ದ.ಕ.ಜಿಲ್ಲಾ ಸುನ್ನೀ ಜಂಇಯ್ಯತುಲ್ ಉಲಮಾ ವತಿಯಿಂದ ನಡೆಯುವ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತಿದ್ದು ಸುಸಾಮ ಅಧ್ಯಕ್ಷ ಅಬೂಶಝಾ ಅಬ್ದುರ್ರಝಾಖ್ ಅಲ್ ಖಾಸಿಮಿ ಮತ್ತು ಪ್ರಧಾನ ಕಾರ್ಯದರ್ಶಿ ಸ್ನೇಹಜೀವಿ ಖ್ಯಾತಿಯ ಹಾರಿಸ್ ಅಡ್ಕ ನೇತೃತ್ವದ ತಂಡ ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸುತ್ತಿರುವುದು  ನೂತನ ಸಂಘಟನೆಯ ಭಾವೀ ಯಶಸ್ಸಿನ ಶುಭ ಸೂಚನೆಯಾಗಿದೆ.*

*ಉಲಮಾ ದಿಗ್ಗಜರಾದ ಮಹ್ಮೂದುಲ್ ಫೈಝಿ ಓಲೆಮುಂಡೋವು,ಯು.ಕೆ.ಮುಹಮ್ಮದ್ ಸ ಅದಿ ವಳವೂರು,ಕೆ.ಎಂ.ಇಬ್ರಾಹಿಂ ಫೈಝಿ ಕನ್ಯಾನ, ಕೆ.ಎಂ.ಖಾಸಿಂ ಮದನಿ ಕರಾಯ,ಇಬ್ರಾಹಿಂ ಮದನಿ ಮಂಚಿ,ಎಸ್.ಪಿ.ಹಂಝ ಸಖಾಫಿ,ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ, ಎಂ.ಎಸ್.ಎಂ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ,ಡಿ.ಕೆ.ಉಮರ್ ಸಖಾಫಿ ಕಂಬಳಬೆಟ್ಟು,ಆತೂರು ಸ ಅದ್ ಮುಸ್ಲಿಯಾರ್, ಕೆ.ಕೆ.ಎಂ.ಕಾಮಿಲ್ ಸಖಾಫಿ, ಸಿದ್ದೀಖ್ ಸಖಾಫಿ ಮೂಳೂರು,ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ಸಹಿತ* *ಹಲವಾರು ಉಲಮಾಗಳು ಉಭಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.*

*ಪ್ರಸ್ತುತ  ಕಾರ್ಯಕ್ರಮಗಳು ಐತಿಹಾಸಿಕ ಕಾರ್ಯಕ್ರಮವಾಗಿ ಮೂಡಿ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ.*

✍🏻 *ಕೆ.ಎ.ಅಬ್ದುಲ್ ಅಝೀಝ್ ಝುಹ್ ರಿ ಪುಣಚ*

🔴🔴🔴🔴🔴🔴🔴🔴🔴🔴🔴

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.