ಎಸ್ ವೈ ಎಸ್ ಹರೇಕಳ ಸೆಂಟರ್ ಇದರ ಅಧೀನದ ಹತ್ತನೇ ಬ್ರಾಂಚ್ ಆಗಿ ಎಸ್ ವೈ ಎಸ್ ಬೈತಾರ್ ಬ್ರಾಂಚನ್ನು ಬೈತಾರ್ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷರಾದ ಮುಸ್ತಫ ಇವರ ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ತರಲಾಯಿತು.
ಕಾರ್ಯಕ್ರಮವನ್ನು ದ.ಕ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ ಉದ್ಘಾಟಿಸಿ ಮಾತನಾಡಿದರು. ಬಳಿಕ ಹೊಸತಾಗಿ ಅಸ್ತಿತ್ವಕ್ಕೆ ಬಂದ ಎಸ್ ವೈ ಎಸ್ ಬೈತಾರ್ ಬ್ರಾಂಚಿಗೆ ನೂತನ ಸಮಿತಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾ ವೀಕ್ಷಕರಾಗಿ ಎಸ್ ವೈ ಎಸ್ ಹರೇಕಳ ಸೆಂಟರ್ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾಸಿಮ್ ದೇರಿಕಟ್ಟೆ ಆಗಮಿಸಿದ್ದರು.
ಅಧ್ಯಕ್ಷರಾಗಿ ಅಝೀಝ್ ರಾಜಗುಡ್ಡೆ, ಉಪಾಧ್ಯಕ್ಷರುಗಳಾಗಿ ರಫೀಖ್ ಬನಬಳಿ ಹಾಗು ಇಸಾಕ್ ರಾಜಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಖಾದರ್ ಬನಬಳಿ, ಜೊತೆ ಕಾರ್ಯದರ್ಶಿಗಳಾಗಿ ಯೂಸುಫ್ ಬನಬಳಿ ಹಾಗು ಸಿದ್ದೀಕ್ ಬೈತಾರ್ ಹಾಗು ಕೋಶಾಧಿಕಾರಿಯಾಗಿ ರಫೀಕ್ ಬೈತಾರ್ ಇವರುಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಸ್ ವೈ ಎಸ್ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಬೈತಾರ್ ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಮೀರ್ ಬನಬಳಿ ಸ್ವಾಗತಿಸಿದರು. ಎಸ್ಸೆಸ್ಸೆಫ್ ಬೈತಾರ್ ಶಾಖಾಧ್ಯಕ್ಷರಾದ ಮುನೀರ್ ರಾಜಗುಡ್ಡೆ ಧನ್ಯವಾದಗೈದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment