ಮದ್ರಸ ಕಾರ್ಯಕ್ಷೇತ್ರವನ್ನು ಅಭಿವ್ರದ್ಧಿಗೊಳಿಸುವ ನಿಟ್ಟಿನಲ್ಲಿ ಮತ್ತು ಧಾರ್ಮಿಕ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸುವ ಸಲುವಾಗಿ ಉಳ್ಳಾಲದ ಹಳೆಕೋಟೆಯಲ್ಲಿ ನೂತನ ಮದ್ರಸಕ್ಕೆ ಎಸ್ ವೈ ಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್ ನೇತ್ರತ್ವದಲ್ಲಿ ಚಾಲನೆ ನೀಡಲಾಯಿತು. ಮದ್ರಸಕ್ಕೆ ತಾಜುಲ್ ಉಲಮಾ ಖ.ಸಿ ಮದ್ರಸ ಎಂಬ ನಾಮಕರಣ ಮಾಡಲಾಯಿತು. ಪ್ರಸ್ತುತ ಮದ್ರಸ ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ಆಫ್ ಇಂಡಿಯಾ ಸಿಲೆಬಸ್ ಹಾಗು ಅಂಗೀಕಾರದೊಂದಿಗೆ ಕಾರ್ಯಾಚರಿಸಲಿದೆ.
ಮುಸ್ತಫ ಮದನಿ ಉಳ್ಳಾಲ ಸಮಾರಂಭವನ್ನು ಉದ್ಘಾಟಿಸಿದರು. ಅಬ್ದುಲ್ ಹಮೀದ್ ಮುಸ್ಲಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ತಾಜುಲ್ ಉಲಮಾ ಖ.ಸಿ ಮದ್ರಸ ಇದರ ನೂತನ ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಯು ಎಚ್ ಯೂಸುಫ್, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್, ಕೋಶಾಧಿಕಾರಿಯಾಗಿ ಅಬ್ಬಾಸ್ ರಫೀಖ್, ಸಂಚಾಲಕರಾಗಿ ಅಬ್ದುಲ್ ಸತ್ತಾರ್ ಹಳೆಕೋಟೆ, ಉಪಾಧ್ಯಕ್ಷರಾಗಿ ಅಬೂಸಾಲಿ, ಜೊತೆ ಕಾರ್ಯದರ್ಶಿಯಾಗಿ ಅಶ್ರಫ್ ಹಾಗು ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಅಬ್ದುಲ್ ಹಮೀದ್, ಬಶೀರ್, ಅಬ್ದುರ್ರಹ್ಮಾನ್, ಹಂಝ, ಇಬ್ರಾಹಿಂ ಹಾಗು ಕಬೀರ್ ಇವರುಗಳನ್ನು ಆಯ್ಕೆ ಮಾಡಲಾಯಿತು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment