ಎಸ್ ಬಿ ಎಸ್ ಉಳ್ಳಾಲ ಝೋನ್ ಇದರ ಆಶ್ರಯದಲ್ಲಿ ಉಳ್ಳಾಲ ಮೇಲಂಗಡಿಯ ತಾಜುಲ್ ಉಲಮಾ ಸುನ್ನೀ ಸೆಂಟರ್ ನಲ್ಲಿ ನಡೆದ SBS MELLIFEROUS ಸ್ಪರ್ಧಾ ಕಾರ್ಯಕ್ರಮದಲ್ಲಿ ಪಟ್ಲದ ಖುವ್ವತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿ ಹಲವು ಸ್ಪರ್ಧೆಯಲ್ಲಿ ವಿಜೇತರಾಗಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಉಳ್ಳಾಲ ತೊಕ್ಕೋಟು ಆಸುಪಾಸಿನ 15 ಕ್ಕಿಂತಲೂ ಹೆಚ್ಚು ಮದ್ರಸದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇಪ್ಪಕ್ಕಿಂತಲೂ ಹೆಚ್ಚು ವಿಷಯದಲ್ಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಟ್ಲದ ವಿದ್ಯಾರ್ಥಿಗಳು ಮೂರು ವಿಷಯಗಳಲ್ಲಿ ಪ್ರಥಮ ಸ್ಥಾನ ಹಾಗು ಮೂರು ವಿಷಯಗಳಲ್ಲಿ ದ್ವಿತೀಯ ಸ್ಥಾನ ಪಡೆದರು. ಬುರ್ದಾ ಸ್ಪರ್ಧೆಯಲ್ಲಿ ಅಳೇಕಲ ತಂಡ ಪ್ರಥಮ ಸ್ಥಾನ ಪಡೆದಿದ್ದು ತುಂಬಾ ಪೈಪೋಟಿ ನೀಡುತ್ತಾ ಪಟ್ಲದ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆಯಿತು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment