ಅಳೇಕಲದಲ್ಲಿ ನಡೆದ ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ಇದರ ಪ್ರತಿಭೋತ್ಸವ 2017 ಕಾರ್ಯಕ್ರಮದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಸ್ಸೆಸ್ಸೆಫ್ ಪಟ್ಲ ಶಾಖೆಯು ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಬಾಚಿಕೊಂಡಿದೆ.
ತೊಕ್ಕೋಟು ಸೆಕ್ಟರ್ ಅಧೀನದ ಎಲ್ಲಾ ಏಳು ಶಾಖೆಗಳು ಪ್ರತಿಭೋತ್ಸವ ಕಾರ್ಯಕ್ರಮದ ಭಾಷಣ, ಹಾಡು, ಪ್ರಬಂಧ, ಕ್ವಿಝ್, ಬುರ್ದಾ, ಕವಾಲಿ, ಕಥಾಪ್ರಸಂಗ (ಸೀರತ್) ಸಹಿತ ವಿವಿಧ ವಿಷಯಗಳ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ತೀವ್ರ ಪೈಪೋಟಿ ನೀಡಿದ ಸ್ಪರ್ಧಾ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಅಳೇಕಲ ಶಾಖೆ ಚಾಂಪಿಯನ್ ಆಗಿ ಪ್ರಥಮ ಟ್ರೋಫಿಯನ್ನು ತನ್ನದಾಗಿಸಿದ್ದು, ಎಸ್ಸೆಸ್ಸೆಫ್ ಪಟ್ಲ ಶಾಖೆ ರನ್ನರ್ ಅಪ್ ಪಡೆದು ದ್ವಿತೀಯ ಟ್ರೋಫಿಯನ್ನು ತನ್ನದಾಗಿಸಿದೆ.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment