*ಉಳ್ಳಾಲ*:ಇಲ್ಲಿನ ಅಲ್ ಮದ್ರಸತುಲ್ ಮುಬಾರಕ್ ಮುಕ್ಕಚ್ಚೇರಿ ವತಿಯಿಂದ ಮಹಾನ್ ವಿದ್ವತ್ಪ್ರತಿಭೆ,ತಾಜುಲ್ ಉಲಮಾ ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ಉಳ್ಳಾಲ ತಂಙಳ್ ರವರ ಅನುಸ್ಮರಣಾ ಕಾರ್ಯಕ್ರಮ ನಡೆಯಿತು.ಮದ್ರಸದ ಮುಖ್ಯೋಪಾಧ್ಯಾಯ ಎಂ.ಎ.ಇಸ್ಮಾಈಲ್ ನಈಮಿ ಮಂಗಳಪೇಟೆ ಅನುಸ್ಮರಣಾ ಭಾಷಣ ಮಾಡಿದರು.ಅಧ್ಯಾಪಕರಾದ ಅಬ್ಬಾಸ್ ಮದನಿ ಅಳೇಕಲ ದುಆ ನೆರವೇರಿಸಿದರು. ಮುಕ್ಕಚ್ಚೇರಿ ಜುಮಾ ಮಸೀದಿ ಕೋಶಾಧಿಕಾರಿ ಯು.ಡಿ.ಮುಹಮ್ಮದ್ ಹಾಜಿ,ಪ್ರಧಾನ ಕಾರ್ಯದರ್ಶಿ ರಿಯಾಝ್ ಮುಕ್ಕಚ್ಚೇರಿ,ಅಧ್ಯಾಪಕರಾದ ಹಂಝ ಮದನಿ ಹಳೆಕೋಟೆ,ಕರೀಮ್ ಮುಸ್ಲಿಯಾರ್ ಮುಕ್ಕಚ್ಚೇರಿ ಮುಂತಾದವರು ಉಪಸ್ಥಿತರಿದ್ದರು. ಅಧ್ಯಾಪಕರಾದ ಎಂ.ಎ.ಅಬ್ದುಲ್ ಅಝೀಝ್ ಮದನಿ ಮಲಾರ್ ಸ್ವಾಗತಿಸಿ,ಧನ್ಯವಾದವಿತ್ತರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment