ಎಸ್ ವೈ ಎಸ್ ಫರೀದ್ ನಗರ ಬ್ರಾಂಚ್ ಆಶ್ರಯದಲ್ಲಿ ಮಾಸಿಕ ಮೆಹಫಿಲೇ ತ್ವಯ್ಬಃ ಮಜ್ಲಿಸ್ ಮತ್ತು ತರಗತಿ ಎಸ್ ವೈ ಎಸ್ ಫರೀದ್ ನಗರ ಬ್ರಾಂಚ್ ಅಧ್ಯಕ್ಷರಾದ ಶಾಹುಲ್ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಯ್ಗಿದ್ ಶರಫುದ್ದೀನ್ ಅಲ್ ಹೈದ್ರೋಸಿ ತಂಗಳ್ ಫರೀದ್ ನಗರ ಮೆಹಫಿಲೇ ತ್ವಯ್ಬಃ ಧ್ಸಿಕ್ರ್ ಮಜ್ಲಿಸಿನ ನೇತ್ರತ್ವ ವಹಿಸಿ ದುಆ ನೆರವೇರಿಸಿದರು. ಇಸಾಕ್ ಝುಹ್ರಿ ಕಾನಕೆರೆ ತರಗತಿ ನಡೆಸಿದರು.
ಆರ್ ಜೆ ಎಂ ಅಧ್ಯಕ್ಷರಾದ ಬದ್ರುದ್ದೀನ್, ಎಸ್ ವೈ ಎಸ್ ಹಿರಿಯ ನಾಯಕ ಮುಹಮ್ಮದ್ ಹಾಜಿ ಎಸ್, ಉಪಾಧ್ಯಕ್ಷರಾದ ಮುಹಮ್ಮದ್ ಹಾಜಿ ಡಿಕೆ ಹಾಗು ಇಸ್ಮಾಯಿಲ್ ಎಚ್, ಕಾರ್ಯದರ್ಶಿಗಳಾದ ಅಬೂಬಕರ್ ಹಾಗು ಆಸಿಫ್, ಕೋಶಾಧಿಕಾರಿ ಉಸ್ಮಾನ್ ಬಿ, ಎಸ್ಸೆಸ್ಸೆಫ್ ಫರೀದ್ ನಗರ ಶಾಖಾಧ್ಯಕ್ಷರಾದ ನೌಫಲ್ ಫರೀದ್ ನಗರ ಹಾಗು ಎಸ್ಸೆಸ್ಸೆಫ್, ಎಸ್ ವೈ ಎಸ್ ಕಾರ್ಯಕರ್ತರು ಭಾಗವಹಿಸಿದರು. ಫರೀದ್ ನಗರ ಬ್ರಾಂಚ್ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಮಜೀದ್ ಫರೀದ್ ನಗರ ಸ್ವಾಗತಿಸಿ ಕೊನೆಯಲ್ಲಿ ಧನ್ಯವಾದಗೈದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment