Skip to main content

ಸಂವಿಧಾನ ಮತ್ತು ಶರೀಅತ್ ಹಸ್ತಕ್ಷೇಪ ವಿರುದ್ಧ ಗುಡುಗಿದ ಶಾಫಿ ಸ ಅದಿ,ಝೈನಿ ‌ಕಾಮಿಲ್




*ಮಂಗಳೂರು.* ಭಾರತ ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು ಭವ್ಯ ಭಾರತ ದೇಶದ ಮಹೋನ್ನತ ಸಂವಿಧಾನ ಎಲ್ಲಾ ವರ್ಗದ ಜನತೆಯ  ಆಶಾಕಿರಣವಾಗಿದೆ ಎಂದು ಎಸ್ ಎಸ್ ಎಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಹಜ್ ಸಮಿತಿ ಸದಸ್ಯ ಕೆ.ಎಂ.ಅಬೂಬಕರ್ ಸಿದ್ದೀಖ್ ಮೋಂಟುಗೋಳಿ ಹೇಳಿದ್ದಾರೆ.
ರಾಜ್ಯ ಎಸ್ ವೈ ಎಸ್ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಂಡ ಪ್ರಜಾಪ್ರಭುತ್ವ ಜಾಗೃತಿ ಸಮಾವೇಶ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
 ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ದೂರ ದೃಷ್ಟಿಯ ಪಲವಾಗಿ 1950 ಜನವರಿ 26 ರಂದು ರಚನೆಗೊಂಡ ಸಂವಿಧಾನ ಎಲ್ಲಾ ಧರ್ಮ, ಜಾತಿ,ಪಂಥ ಗಳ ಆಶಯಗಳಿಗೆ ಪೂರಕವಾಗಿದ್ದು ಇದನ್ನು ದುರ್ವ್ಯಾಖ್ಯಾನ ಮಾಡುವ ಮೂಲಕ ಇಡೀ ನ್ಯಾಯಾಂಗ ವ್ಯವಸ್ಥೆಗೆ ಅಪಚಾರ ಮಾಡಲಾಗುತ್ತಿದೆ.
ಸರ್ವ ಜನಾಂಗದವರ ತವರೂರಾಗಿದ್ದು ಭಾರತದಲ್ಲಿ ಯಾವ ರೀತಿಯ ವಿಭಜನಾವಾದಗಳೂ ಯಶಸ್ವಿ ಯಾಗದೆಂದು ಅವರು ಹೇಳಿದರು.

ಮುಖ್ಯ ಭಾಷಣ ಮಾಡಿದ ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಎಂ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಯವರು "ವೈವಿಧ್ಯಮಯ ಸಂಸ್ಕೃತಿಗಳ ತವರೂರಾದ ಭಾರತವನ್ನು‌ ಮಹಾತ್ ಗಾಂಧೀಜಿ, ಜವಹರಲಾಲ್ ನೆಹರು, ವಲ್ಲಭಭಾಯಿ ಪಟೇಲ್, ಮೌಲಾನಾ ಅಬುಲ್ ಕಲಾಂ ರಂಥ ಸರ್ವಧರ್ಮ ಸಹಿಷ್ಣುತಾ ವಾಧಿಗಳು ಒಗ್ಗಟ್ಟಿನಿಂದ ಮುನ್ನಡೆಸಿ ಸೌಹಾರ್ದ ಪರಂಪರೆಯ ಭದ್ರ ಬುನಾದಿಯನ್ನು ಹಾಕಿ ಕೊಟ್ಟಿದ್ದಾರೆ.
ಇಸ್ಲಾಂ ಧರ್ಮ ಹಾಗೂ ಕ್ರೈಸ್ತ ಸಂಸ್ಕೃತಿಗೆ ರತ್ನಗಂಬಳಿ ಹಾಸಿ ಸ್ವಾಗತ ನೀಡಿ ಭಾರತದ ಭಾಗವಾಗಿಸಿದ ಹಿಂದೂ ಸಮುದಾಯ ಸೌಹಾರ್ದತೆಯ ಪ್ರತೀಕವಾಗಿದೆ.
ಮಂದಿರ ,ಮಸೀದಿ, ಚರ್ಚ್ ಗಳು ಮಾನವೀಯತೆಯ ತಾಣಗಳೇ ಹೊರತು ಮಾನವ ಮನಸ್ಸುಗಳನ್ನು ಒಡೆಯುವ ಕೇಂದ್ರ ಗಳಲ್ಲ.
ಸಂವಿಧಾನ ಬದ್ಧ ವಾಗಿ ಸಹಬಾಳ್ವೆ ನಡೆಸುವ ಎಲ್ಲಾ ಪ್ರಯತ್ನಗಳನ್ನು ಸಂವಿಧಾನದ ಚೌಕಟ್ಟಿನಲ್ಲಿ ಹತ್ತಿಕ್ಕಲಾಗುವುದು.
ಭಾರತದ ಮಣ್ಣಿನ ಪ್ರತಿ ಕಣಗಳಲ್ಲೂ ಭಾರತೀಯತೆ ಅಂತರ್ಲೀನವಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಮಾತನಾಡಿ, ಧಾರ್ಮಿಕ ಕಾರ್ಯಾಚರಣೆ ಯೊಂದಿಗೆ ಸಮಾಜದ ಕಟ್ಟ ಕಡೆಯಲ್ಲಿರುವವರ ಏಳಿಗೆಗಾಗಿ ಸಾಂತ್ವನ ಯೋಜನೆ ಮೂಲಕ ಎಸ್ ವೈ ಎಸ್ ಸಮಾಜದ ನಾಡಿ ಸ್ಪಂದನ ಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿದೆ.
ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲ್ಲೂಕು ಗಳಲ್ಲಿ ಸಂಘಟನೆಯ ಶಾಖೆ ಗಳನ್ನು ರಚಿಸುವ ಮೂಲಕ ರಾಜ್ಯದ ಜನತೆಗೆ ಮಾನವೀಯ ಸಂದೇಶಗಳನ್ನು ಸಾರಲು ಯೋಜನೆ ಹಾಕಿ ಕೊಳ್ಳಲಾಗಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಇಹ್ಸಾನ್ ರಾಜ್ಯಾಧ್ಯಕ್ಷ ಎನ್.ಕೆ.ಎಂ.ಶಾಫಿ ಸ ಅದಿ ಬೆಂಗಳೂರು ಮಾತನಾಡಿ, ಜನರ ಹಕ್ಕುಗಳ ರಕ್ಷಣೆಗೆ ನಿಲ್ಲಬೇಕಾದ ದೇಶದ ನ್ಯಾಯಾಂಗ ವ್ಯವಸ್ಥೆ ಅಪಾಯದಲ್ಲಿದ್ದು ಸ್ವಾರ್ಥ ರಾಜಕೀಯ ಪಕ್ಷಗಳಿಂದಾಗಿ ದೇಶದ ನೆಮ್ಮದಿ ಹಾಳಾಗಿದೆ.
ಧರ್ಮ ಗಳ ವಿಷಯದಲ್ಲಿ ಸರಕಾರಗಳ ಹಸ್ತಕ್ಷೇಪ ಸಂವಿಧಾನ ವಿರೋಧಿ ಕೃತ್ಯವಾಗಿದೆ.
ಇಸ್ಲಾಂ ಧರ್ಮದ ಶರೀಅತ್ ನಲ್ಲಿ ಹಸ್ತಕ್ಷೇಪ ಮಾಡುವ ಎಲ್ಲಾ ಪ್ರಯತ್ನಗಳನ್ನು ಹತ್ತಿಕ್ಕಲಾಗುವುದು ಎಂದು 
ಅವರು ಆವೇಶ ಭರಿತರಾಗಿ ನುಡಿದರು.

ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಹಾಜಿ ಯು.ಕೆ.ಮೋನು‌ ಕಣಚೂರು ಮಾತನಾಡಿ,ಭಾರತದ ಸಂವಿಧಾನ ವ್ಯವಸ್ಥಿತವಾಗಿ ರಚನೆಗೊಂಡ ಕಾರಣ ಇಡೀ ಭಾರತೀಯ ಸಮುದಾಯ ನಿರ್ಭಯದಿಂದ ಬದುಕುತ್ತಿದ್ದಾರೆ.
ಕೆಲವರ ಕುಹಕ,ಅಪಪ್ರಚಾರಗಳಿಗೆ ಕಿವಿಗೊಡಬಾರದು.
ಭಾರತೀಯರೆಲ್ಲ ಒಂದೇ ತಾಯಿಯ ಮಕ್ಕಳಂತೆ ಜೀವಿಸಿ ಇಡೀ ಜಗತ್ತಿಗೆ ಮಾದರಿಯಾಗಬೇಕೆಂದು ಅವರು ಹೇಳಿದರು.

ಮಂಗಳೂರು ಮಹಾನಗರಪಾಲಿಕೆ ಯ ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿ, ಭಾರತ ಸ್ವಾತಂತ್ರ್ಯದಲ್ಲಿ ಹಿಂದೂ- ಮುಸ್ಲಿಂ ಸಮುದಾಯದ ಧೀರ ದೇಶ ಪ್ರೇಮಿಗಳು ಭುಜಕ್ಕೆ ಭುಜ ಕೊಟ್ಟು ಹೋರಾಡಿದ್ದಾರೆ.
ಸ್ವತಂತ್ರ ಭಾರತದ ಸಂವಿಧಾನ ಎಲ್ಲಾ ವರ್ಗದ ಜನರಿಗೂ ಸಮಾನ ಅವಕಾಶ ಕಲ್ಪಿಸುತ್ತಿದೆ.
ಭಾರತದ ಸೌಹಾರ್ದ ಪರಂಪರೆಯನ್ನು ಅಳಿಸಲು ಯಾವ ಶಕ್ತಿಗಳಿಂದಲೂ ಸಾಧ್ಯವಿಲ್ಲ ಇಂಥಾ ಷಡ್ಯಂತ್ರಗಳ ವಿರುದ್ಧ ಸಂಘಟಿತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಎಸ್ ವೈ ಎಸ್ ಉಡುಪಿ ಜಿಲ್ಲಾಧ್ಯಕ್ಷ ಕೋಟೇಶ್ವರ ತಂಙಳ್, ಬಿ.ಎಂ.ಮುಮ್ತಾಝ್ ಅಲಿ, ಎಸ್ ಎಸ್ ಎಫ್ ದ.ಕ.ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ,ಸುಹೈಲ್ ಖಂದಕ್,ಅಶ್ರಫ್ ಸ ಅದಿ ಮಲ್ಲೂರು,ಸಿದ್ದೀಖ್ ಸಖಾಫಿ ಮೂಳೂರು,ಕಲ್ಕಟ್ಟ ರಝ್ವಿ,ಖಾಸಿಂ ಪದ್ಮುಂಜ,ಅಲ್ತಾಫ್ ಕುಂಪಲ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಎಸ್ ವೈ ಎಸ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಸ್ವಾಗತಿಸಿದರು.

*ವರದಿ: ಕೆ.ಎ.ಅಬ್ದುಲ್ ಅಝೀಝ್ ಝುಹ್ ರಿ ಪುಣಚ*

◽◽◽◽◽◽◽◽◽◽◽

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.