Skip to main content

ಸಖಾಫಿ ವಿದ್ವಾಂಸರ ಬೃಹತ್  ಸಂಗಮ ಹಾಗು ನೂತನ ಸಖಾಫಿ ವಿದ್ವಾಂಸರಿಗೆ ಅಭಿನಂದನಾ ಸಮಾರಂಭ


ವಿಶ್ವ ವಿಖ್ಯಾತ ವಿದ್ವಾಂಸ ಸುಲ್ತಾನುಲ್ ಉಲಮಾರ  ಶಿಷ್ಯಂದಿರಾದ ಕರ್ನಾಟಕದ ಸಖಾಫಿ ವಿದ್ವಾಂಸರ ಬೃಹತ್  ಸಂಗಮ ಹಾಗು ಸುಲ್ತಾನುಲ್ ಉಲಮಾ ಶೈಖುನಾ ಎ.ಪಿ ಉಸ್ತಾದರ ಮಾರ್ಗದರ್ಶನದಲ್ಲಿ ವಿಶ್ವ ವಿಖ್ಯಾತ ವಿದ್ಯಾ ಕೇಂದ್ರ ಮರ್ಕಝುಸ್ಸಖಾಫತಿಸ್ಸುನ್ನಿಯ್ಯಃ ದಿಂದ ಸಖಾಫಿ ಪದವಿಯನ್ನು ಪಡೆದು ಪವಿತ್ರ ಅಹ್ಲುಸ್ಸುನ್ನತಿ ವಲ್ ಜಮಾಅತಿನ ಕಾರ್ಯಕ್ಷೇತ್ರದಲ್ಲಿ ಸಕ್ರಿಯರಾಗಿರುವ ನೂತನ ಸಖಾಫಿ ವಿದ್ವಾಂಸರಿಗೆ ಅಭಿನಂದನಾ ಸಮಾರಂಭವು ಕರ್ನಾಟಕ ಸಖಾಫಿ ಕೌನ್ಸಿಲ್  ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ  ಸಖಾಫಿ ಕೌನ್ಸಿಲ್  ಅಧ್ಯಕ್ಷರಾದ ಪಿ.ಪಿ ಅಹ್ಮದ್ ಸಖಾಫಿ ಕಾಶಿಪಟ್ನ ವಹಿಸಿದರು. ಎಸ್ ವೈ ಎಸ್ ರಾಜ್ಯ ನಾಯಕ ಡಿ.ಕೆ ಉಮರ್ ಸಖಾಫಿ ಕಂಬಳಬೆಟ್ಟು ದುವಾ ನೆರವೇರಿಸಿದರು. ಎಸ್. ಎಂ. ಎ. ಕರ್ನಾಟಕ ರಾಜ್ಯ ಇದರ ಅಧ್ಯಕ್ಷರಾದ ಸಯ್ಯಿದ್ ಅಲವಿ ಜಲಾಲುದ್ದೀನ್ ಮದನಿ ಅಲ್ ಹಾದಿ ತಂಙಳ್ ಉಜಿರೆ ಮಲ್ ಜಅ್ ತಂಗಳ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಖಾಫಿ ಕೌನ್ಸಿಲ್ ಕೇಂದ್ರ ಸಮಿತಿ ಇದರ ಉಪಾಧ್ಯಕ್ಷರಾದ ವಳ್ಳಿಯಾಡ್ ಮುಹಮ್ಮದ್ ಅಲಿ ಸಖಾಫಿ ಕೇರಳ ಮುಖ್ಯ ಪ್ರಭಾಷಣ ನಡೆಸಿದರು. ಎಸ್ ವೈ ಎಸ್ ಕರ್ನಾಟಕ ರಾಜ್ಯ ಇದರ ಅಧ್ಯಕ್ಷರಾದ ಜಿ ಎಂ ಕಾಮಿಲ್ ಸಖಾಫಿ ಹಾಗು ಎಸ್ ವೈ ಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಪ್ರಾಸ್ತಾವಿಕ ಭಾಷಣ ಮಾಡಿದರು. ಕರ್ನಾಟಕ ಸಖಾಫಿ ಕೌನ್ಸಿಲ್  ಕೋಶಾಧಿಕಾರಿ ಅಸ್ಸಯ್ಯಿದ್ ಶಿಹಾಬುದ್ದೀನ್ ಅಲ್ ಐದ್ರೋಸ್ ಅಸ್ಸಖಾಫಿ ಕಿಲ್ಲೂರು ತಂಗಳ್ ಸಮಾರೋಪ ಭಾಷಣ ಮಾಡಿ ದುವಾ ನೆರವೇರಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಕರ್ನಾಟಕ ಸಖಾಫಿ ಕೌನ್ಸಿಲ್ ವತಿಯಿಂದ ಕರ್ನಾಟಕ ಸುನ್ನೀ ಕೊ ಆರ್ಡಿನೇಷನ್ ಸುನ್ನೀ ಸಂಘಟನೆಗಳ ಒಕ್ಕೂಟ ಇದರ ಪ್ರಧಾನ ಕಾರ್ಯದರ್ಶಿಯಾಗಿ  ಆಯ್ಕೆಯಾದ ಪಿ.ಪಿ. ಅಹ್ಮದ್ ಸಖಾಫಿ ಕಾಶಿಪಟ್ನ, ಎಸ್ ವೈ ಎಸ್ ಕರ್ನಾಟಕ ರಾಜ್ಯ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಎಂ ಕಾಮಿಲ್ ಸಖಾಫಿ ಹಾಗು ಎಸ್ ವೈ ಎಸ್ ಕರ್ನಾಟಕ ರಾಜ್ಯ ಇದರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್  ಸಖಾಫಿ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕರ್ನಾಟಕದ ನೂತನ ಸಖಾಫಿಗಳಲ್ಲಿ ಪ್ರಥಮ ಸ್ಥಾನ ಪಡೆದ ಆಲಂಪಾಡಿ ಉಸ್ತಾದ್ ಮೆಮೋರಿಯಲ್ ಅಹ್ದಲಿಯ್ಯಃ ದರ್ಸ್ ಶಾಂತಿಪಳ್ಳ ಕುಂಬಳೆ ಇದರ ಮುದರ್ರಿಸರಾಗಿರುವ  ಕೆ.ಕೆ ಕಲಂದರ್ ಅಲಿ ಹಿಮಮಿ ಸಖಾಫಿ ಸುರಿಬೈಲ್ ಹಾಗು ದ್ವಿತೀಯ ಸ್ಥಾನ ಪಡೆದ ಪ್ರಸ್ತುತ ಅಹ್ದಲಿಯ್ಯಃ ದರ್ಸ್ ಶಾಂತಿಪಳ್ಳ ಕುಂಬಳೆ ಇದರ ಮತ್ತೋರ್ವ ಮುದರ್ರಿಸರಾಗಿರುವ ಅಬ್ದುಲ್ ರವೂಫ್ ಸಖಾಫಿ ಕ್ರಷ್ಣಾಪುರ ಇವರಿಗೆ ವಿಶೇಷ ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗು ಆವಾರ್ಡ್ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು. ಬಳಿಕ ಮರ್ಕಝ್ ರೂಬಿ ಜ್ಯುಬಿಲಿ ಸಮ್ಮೇಳನದಲ್ಲಿ ಸಖಾಫಿ ಬಿರುದುದಾರಿಗಳಾಗಿ ಹೊರ ಹೊಮ್ಮಿದ ಉಳಿದ ಕರ್ನಾಟಕದ ನವ ಸಖಾಫಿಗಳೆಲ್ಲರಿಗೂ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆ.ಸಿ.ಎಫ್ ರಾಷ್ಟ್ರೀಯ ನಾಯಕರಾಗಿರುವ ಎಸ್ ಪಿ ಹಂಝ ಸಖಾಫಿ, ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಇದರ ಕಾರ್ಯದರ್ಶಿ ಟಿ.ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ, ಕೆ.ಸಿ ಎಫ್ ಸೌದಿ ಅರೇಬಿಯ ರಾಷ್ಟ್ರೀಯಾಧ್ಯಕ್ಷರಾದ ಡಿ.ಪಿ ಬೈತಾರ್ ಸಖಾಫಿ, ಸಯ್ಯಿದ್ ನಿಝಾಮುದ್ದೀನ್ ಸಖಾಫಿ ಬಾಫಖಿ ತಂಗಲ್, ಎಸ್ ವೈ ಎಸ್ ಮಂಗಳೂರು ಝೋನ್ ಅಧ್ಯಕ್ಷರಾದ ಅಶ್ ಅರಿಯ್ಯಃ ಸಖಾಫಿ, ಎಸ್ ವೈ ಎಸ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಿದ್ದೀಕ್ ಸಖಾಫಿ ಮೂಳೂರು, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ  ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಹಾಗು ಇನ್ನಿತರ ಗಣ್ಯ ಉಲಮಾಗಳು ಉಪಸ್ಥಿತರಿದ್ದರು. ಕರ್ನಾಟಕ ಸಖಾಫಿ ಕೌನ್ಸಿಲ್ ಇದರ ಪ್ರಧಾನ ಕಾರ್ಯದರ್ಶಿ ಕೆ.ಕೆ.ಎಂ ಕಾಮಿಲ್ ಸಖಾಫಿ ಸುರಿಬೈಲು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕರ್ನಾಟಕ ಸಖಾಫಿ ಕೌನ್ಸಿಲ್ ಕಾರ್ಯದರ್ಶಿ ಉಸ್ಮಾನ್ ಸಖಾಫಿ ಕಣ್ಣೂರು ಧನ್ಯವಾದಗೈದರು.

ವರದಿ : ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.