ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ SMSCC ಉಳ್ಳಾಲ ಇದರ ಆಶ್ರಯದಲ್ಲಿ ಮಹ್ಲರತುಲ್ ಬದ್ರಿಯ್ಯಃ ಮಜ್ಲಿಸ್ ಹಾಗು ಸನ್ಮಾನ ಕಾರ್ಯಕ್ರಮ ಮತ್ತು ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ SMSCC ಉಳ್ಳಾಲ ಇದರ ನೂತನ ಸಮಿತಿ ಆಯ್ಕೆ ಕಾರ್ಯಕ್ರಮ ಅಬೂ ಅನಸ್ ಜಮಾಲ್ ಮುಸ್ಲಿಯಾರ್ ನೇತ್ರತ್ವದಲ್ಲಿ ಹಳೆಕೋಟೆಯ ತಾಜುಲ್ ಉಲಮಾ ಮದ್ರಸ ದಲ್ಲಿ ನಡೆಯಿತು.
ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ SMO ಉಳ್ಳಾಲ ಇದರ ಅಧ್ಯಕ್ಷರಾದ ಪಿ. ಎಸ್. ಎಂ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ದ್ಸಿಕ್ರ್ ನ ಮಹತ್ವದ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ತಾಜುಲ್ ಉಲಮಾ ಮದ್ರಸ ಹಳೆಕೋಟೆ ಇದರ ಅಧ್ಯಕ್ಷರಾದ ಯು ಎಚ್ ಯೂಸುಫ್ ಹಳೆಕೋಟೆ ಹಾಗು ದ.ಕ ಜಿಲ್ಲಾ ವಖ್ಫ್ ನೂತನ ಸದಸ್ಯರಾಗಿ ಇತ್ತೀಚೆಗೆ ಆಯ್ಕೆಯಾದ ಅಲ್ತಾಫ್ ಕುಂಪಲ ಇವರಿಗೆ ಸೆಂಟ್ರಲ್ ಕಮಿಟಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಬಳಿಕ ಸಯ್ಯಿದ್ ಮದನಿ ಸುನ್ನೀ ಸೆಂಟ್ರಲ್ ಕಮಿಟಿ SMSCC ಉಳ್ಳಾಲ ಇದರ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವಾಧ್ಯಕ್ಷರು : ಗೌರವಾನ್ವಿತ ಉಳ್ಳಾಲ ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಗಲ್ ಮದನಿ ಅಲ್ ಬುಖಾರಿ.
ಅಧ್ಯಕ್ಷರು : ಅಬೂ ಅನಸ್ ಎಸ್ ಕೆ ಜಮಾಲುದ್ದೀನ್ ಮುಸ್ಲಿಯಾರ್, ಉಪಾಧ್ಯಕ್ಷರುಗಳಾಗಿ ಕರೀಂ ಹಾಜಿ ಬಿಸ್ಮಿಲ್ಲಾಹ್ ಮೇಲಂಗಡಿ , ಯು.ಎಚ್ ಯೂಸುಫ್ ಹಳೆಕೋಟೆ, ಪ್ರಧಾನ ಕಾರ್ಯದರ್ಶಿಯಾಗಿ ಇಸ್ಮಾಯಿಲಾಕ ಮುಕ್ಕಚ್ಚೇರಿ, ಜೊತೆ ಕಾರ್ಯದರ್ಶಿಗಳಾಗಿ ಬಶೀರ್ ಸಖಾಫಿ ಮೇಲಂಗಡಿ ಹಾಗು ಅಬೂಬಕರ್ ಹಳೆಕೋಟೆ, ಕೋಶಾಧಿಕಾರಿಯಾಗಿ ರಹ್ಮತ್ ಆಟೋ ಮತ್ತು ಸಂಚಾಲಕರಾಗಿ ಅಬ್ದುಲ್ ಸತ್ತಾರ್ ಹಳೆಕೋಟೆ ಇವರನ್ನು ಆರಿಸಲಾಯಿತು.
ಈ ಸಂದರ್ಭದಲ್ಲಿ ಉಳ್ಳಾಲ ನಗರ ಸಭಾ ಸದಸ್ಯ ಫಾರೂಕ್ ಹಳೆಕೋಟೆ, ಅಬ್ದುಲ್ ಅಝೀಝ್ ಕೋಡಿ ಸೀ ರೋಡ್, ಹಮೀದ್ ಹಳೆಕೋಟೆ ಮತ್ತಿತ್ತರರು ಉಪಸ್ಥಿತರಿದ್ದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment