ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್ಸೆಸ್ಸೆಫ್ ಬಂಟ್ವಾಳ ಸೆಕ್ಟರ್ ವತಿಯಿಂದ ಎಸ್.ಬಿ.ಎಸ್ ವಿಧ್ಯಾರ್ಥಿಗಳಿಗೆ ಬಟರ್ ಫ್ಲೈ ಕ್ಯಾಂಪ್ ಪೆರಾಳದಲ್ಲಿ ನಡೆಯಿತು. ಸೆಕ್ಟರ್ ಉಪಾಧ್ಯಕ್ಷರಾದ ಜುನೈದ್ ಮುಸ್ಲಿಯಾರ್ ಅರಬಿಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಪೆರಾಲ ಮಸೀದಿ ಖತೀಬರಾದ ಉಸ್ಮಾನ್ ಸಖಾಫಿ ಉಸ್ತಾದರು ದುವಾಗೈದು ಉದ್ಘಾಟಿಸಿದರು. ಪ್ರಧಾನ ಕಾರ್ಯದರ್ಶಿ ಹಬೀಬ್ ಪೆರಾಳ ಸ್ವಾಗತಿಸಿದರು. ಎಸ್ಸೆಸ್ಸೆಫ್ ಬಂಟ್ವಾಳ ಡಿವಿಷನ್ ಕಾರ್ಯದರ್ಶಿ ಹಾರಿಸ್ ಪೆರಿಯಪಾದೆ "ಜಲ ಅಮೂಲ್ಯ ಸಂಪತ್ತು"*ಲ ಎಂಬ ವಿಷಯದಲ್ಲಿ ತರಗತಿ ನಡೆಸಿದರು. ಇಸ್ಲಾಮಿನಲ್ಲಿ ಮಹತ್ವ ಕಲ್ಪಿಸಿದ ಐದು ವಿಧದ ನೀರುಗಳಾದ ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ ಕೈ ಬೆರಳಿನಿಂದ ಬಂದ ನೀರು, ಝಂ ಝಂ ನೀರು, ಹೌಳುಲ್ ಕೌಸರ್, ನೈಲ್ ನದಿಯ ನೀರು, ಸಾಮಾನ್ಯ ನೀರು ಹೀಗೆ ಐದು ಪ್ರಮುಖ ನೀರಿನ ಬಗ್ಗೆ ವಿವರಿಸಿದರು. ಭೂಮಿಯಲ್ಲಿರುವ ಒಟ್ಟು ನೀರಿನಲ್ಲಿ ಕೇವಲ ಒಂದು ಶತಮಾನ ಮಾತ್ರ ಶುದ್ಧ ನೀರಾಗಿರುತ್ತದೆ ಉಳಿದ ತೊಂಬತ್ತೊಂಬತ್ತು ಶತಮಾನ ಉಪ್ಪು, ಮಂಜು, ಹಿಮ ಗಳಾಗಿರುತ್ತದೆ ಆದುದರಿಂದ ನೀರನ್ನು ಮಿತವಾಗಿ ಬಳಸಬೇಕೆಂದು ಕರೆ ನೀಡಿದರು.
ನಂತರ "ಒಳಿತಿಗಾಗಿ ಒಗ್ಗೂಡಿ" ಎಂಬ ವಿಷಯದಲ್ಲಿ ಎಸ್ಸೆಸ್ಸೆಫ್ ಬಂಟ್ವಾಳ ಸೆಕ್ಟರ್ ಉಪಾಧ್ಯಕ್ಷರಾದ ಜುನೈದ್ ಮುಸ್ಲಿಯಾರ್ ಅರಬಿಗುಡ್ಡೆ ತರಗತಿ ನಡೆಸಿದರು. ಅಲ್ಲಾಹನ ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಮರನ್ನು ತಮ್ಮ ಜೀವಕ್ಕಿಂತಲೂ ಹೆಚ್ಚಾಗಿ ಪ್ರೀತಿಸಬೇಕು, ಪ್ರತಿ ದಿನವೂ ಸ್ವಲಾತ್ ಹೇಳಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕ್ಯಾಂಪಸ್ ಕಾರ್ಯದರ್ಶಿ ಆಶಿಕ್ ಪೆರಾಲ,ಪದಾಧಿಕಾರಿಗಳಾದ ಅಶ್ರಫ್ ಸಖಾಫಿ ಪೆರಾಲ, ಸುಹೈಲ್ ಕುಳಾಲ್, ಸಂಶುದ್ದೀನ್ ಪೆರಾಳ ಉಪಸ್ಥಿತರಿದ್ದರು.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment