ಉಳ್ಳಾಲ ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಉಳ್ಳಾಲದಾದ್ಯಂತವಿರುವ ಮದ್ರಸಗಳ 5, 7 ಹಾಗು 10 ನೇ ತರಗತಿಗಳ ಪಬ್ಲಿಕ್ ಪರೀಕ್ಷಾ ಫಲಿತಾಂಶ ಇಂದು (10-05-2018) ಪ್ರಕಟಗೊಂಡಿದ್ದು, ಎಲ್ಲಾ ಮದ್ರಸದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಪಟ್ಲ ಖುವ್ವತುಲ್ ಇಸ್ಲಾಮ್ ಮದ್ರಸದ ಏಳನೇ ಮತ್ತು ಹತ್ತನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕದೊಂದಿಗೆ ಉತೀರ್ಣರಾಗಿದ್ದು ಮದ್ರಸಕ್ಕೆ 100% ಫಲಿತಾಂಶ ಬಂದಿದೆ. ಏಳನೇ ತರಗತಿಯಲ್ಲಿ ಮುಬಶ್ಶಿರ ಪ್ರಥಮ ಹಾಗು ಜಾವಿದ್ ದ್ವಿತೀಯ ರಾಂಕ್ ಪಡೆದಿದ್ದು. ಹತ್ತನೇ ತರಗತಿಯಲ್ಲಿ ಆಯಿಶ ಅಸ್ನಾ ಪ್ರಥಮ ಹಾಗು ಹಕೀಫ ದ್ವಿತೀಯ ರಾಂಕ್ ಪಡೆದಿದ್ದಾರೆ. 5 ನೇ ತರಗತಿಯಲ್ಲಿ 87% ಫಲಿತಾಂಶ ಬಂದಿದ್ದು, ಖದೀಜ ಮುಫೀದ ಪ್ರಥಮ ಹಾಗು ಮುಹಮ್ಮದ್ ಅಫ್ಝಲ್ ದ್ವಿತೀಯ ರಾಂಕ್ ತಮ್ಮದಾಗಿಸಿದ್ದಾರೆ.
ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...
Comments
Post a Comment