Skip to main content

ಖುವ್ವತುಲ್ ಇಸ್ಲಾಂ ಮದ್ರಸ ಪಟ್ಲ ಇದರ 2018 - 2019 ನೇ ಸಾಲಿನ ಮದ್ರಸ ಪ್ರಾರಂಭೋತ್ಸವ ಹಾಗು ಮನೆ ಮನೆಗೆ ಸಸಿ ವಿತರಣಾ ಕಾರ್ಯಕ್ರಮ


ಖುವ್ವತುಲ್ ಇಸ್ಲಾಂ ಮದ್ರಸ ಪಟ್ಲ ಇದರ 2018 - 2019 ನೇ ಸಾಲಿನ ಮದ್ರಸ ಪ್ರಾರಂಭೋತ್ಸವ ಹಾಗು ಮನೆ ಮನೆಗೆ ಸಸಿ ವಿತರಣಾ ಕಾರ್ಯಕ್ರಮ ಕಲ್ಲಾಪು ಪಟ್ಲದ ಮದ್ರಸ ಹಾಲ್ ನಲ್ಲಿ ನಡೆಯಿತು. 
            ತಖ್ವಾ ಜುಮಾ ಮಸೀದಿ ಪಟ್ಲ ಅಧ್ಯಕ್ಷರಾದ ಮಹಮೂದ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಮದ್ರಸ ಪ್ರಾರಂಭೋತ್ಸವವನ್ನು ಕಲ್ಲಾಪುವಿನ ಸಮಾಜ ಸ್ನೇಹಿಯೋರ್ವರ ಸಂಪೂರ್ಣ ಸಹಕಾರದೊಂದಿಗೆ  ಮನೆ ಮನೆಗೆ ಸಸಿ ವಿತರಿಸುವ ಮೂಲಕ ವೈವಿಧ್ಯಮಯ ರೀತಿಯಲ್ಲಿ ಆಚರಿಸಲಾಯಿತು. ಅರಿವಿನಂಗಳಕ್ಕೆ ಮನುಕುಲವನ್ನು ನಡೆಸಿದ ಪ್ರವಾದಿ ಮುಹಮ್ಮದ್ ಪೈಗಂಬರ್ ಸ್ವಲ್ಲಲ್ಲಾಹು ಅಲೈಹಿವ ಸಲ್ಲಮರ ದೇವಸಂದೇಶದ ಮೂಲಕ ಸಂಸ್ಥಾಪಿತಗೊಂಡ ಪವಿತ್ರ ಇಸ್ಲಾಂ ಎಂಬ ಶಾಂತಿಯ ಜೀವನದರ್ಶನಗಳ ಆರಂಭದ ಹೆಜ್ಜೆ ಮದ್ರಸಾಗಳು ಆಗಿದೆ. ಅದರತ್ತ ಕಣ್ಣೋಟ ಹರಿಸುವಾಗ ಆಧುನಿಕ ಮದ್ರಸಾ ರಂಗದ ಸ್ಫಷ್ಟ ರಚನಾಕಾರ ಸಂಸ್ಥಾಪಕ ಮರ್ಹೂಂ ನೂರುಲ್ ಉಲಮಾ ಎಂ.ಎ. ಅಬ್ದುಲ್ ಖಾದಿರ್ ಮುಸ್ಲಿಯಾರ್  ನಮ್ಮ ನಡುವೆ ಶತಾಯುಷಿಯಾಗಿ ಬಾಳೀ ವಫಾತಾದ ವಿದ್ವಾಂಸ ಗುರು ಸದಾಕಾಲವು ಚಿರಸ್ಮರಣೀಯರು. ಬಹಳ ವರ್ಷಗಳ ಹಿಂದೆ ಊರು ಕೇರಿಗಳಿಗೆ ಪಾದಯಾತ್ರೆ ಮಾಡಿ ಅರೆಹೊಟ್ಟೆಯಲ್ಲಿ ಸಾಗಿ ಮದ್ರಸ ಸಂಸ್ಥಾಪನೆಯ ಸಂದೇಶ ಮುಟ್ಟಿಸಿ ಪ್ರಾಯೋಗಿಕತೆಗೆ ತಂದ ಮದ್ರಸಾ ಪ್ರಸ್ಥಾನ ಇಂದು ಬೆಳೆದು ಹೆಮ್ಮರವಾಗಿ ತಲೆಮಾರಿಗೆ ದೀನೀ ಅರಿವಿನ ನೆರಳನ್ನು ನೀಡುತ್ತಿದೆ. ಅದರ ಪ್ರತಿಫಲದಲ್ಲೊಂದು ಅಂಶ ಎಂ.ಎ.ಉಸ್ತಾದರ ಆತ್ಮಕ್ಕೆ ನಿತ್ಯ ನಿರಂತರ ಸಾಗುತಿದೆ ಎಂದು ಮದ್ರಸ ಅಧ್ಯಾಪಕರಾದ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ ತಿಳಿಸಿದರು. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪಟ್ಲ ಜುಮಾ ಮಸೀದಿ ಮುದರ್ರಿಸರಾದ ಅಬೂ ಮುಖ್ತಾರ್ ಅಶ್ರಫ್ ಸಖಾಫಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಸ್ಥ, ಸುದ್ರಢ ಸಮಾಜ ನಿರ್ಮಾಣಕ್ಕೆ ಧಾರ್ಮಿಕ ಅರಿವು ಅನಿವಾರ್ಯ ಎಂದು ತಿಳಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಸಯ್ಯಿದ್ ಮದನಿ ಕೇಂದ್ರ ಸಮಿತಿ ಸದಸ್ಯರಾದ ಮೊಯ್ದಿನ್, ಪಟ್ಲ ಮಸೀದಿ ಉಪಾಧ್ಯಕ್ಷರಾದ ಹಾರಿಸ್, ಪ್ರಧಾನ ಕಾರ್ಯದರ್ಶಿ ಸದ್ದಾಂ ಕಲ್ಲಾಪು, ಮದ್ರಸ ಅಧ್ಯಾಪಕರಾದ ಶಾಫಿ ಸಖಾಫಿ ಹಾಗು ಮದ್ರಸ ವಿದ್ಯಾರ್ಥಿಗಳು, ಪೋಷಕರು, ಊರ ಬಾಂಧವರು ಉಪಸ್ಥಿತರಿದ್ದರು. ಮದ್ರಸ ಮುಖ್ಯೋಪಾಧ್ಯಾಯರಾದ ಮುನೀರ್ ಲತೀಫಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.