Skip to main content

ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಸಮಾರಂಭ ಹಾಗು ಪ್ರಾರ್ಥನಾ ಸಂಗಮ



ತಖ್ವಾ ಜುಮಾ ಮಸೀದಿ ಹಾಗು ಖವ್ವತುಲ್ ಇಸ್ಲಾಂ ಮದ್ರಸ ಪಟ್ಲ ಇದರ ಆಡಳಿತ ಸಮಿತಿ ಆಶ್ರಯದಲ್ಲಿ ಪ್ರಾರ್ಥನಾ ಸಂಗಮ ಹಾಗು ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ ಸಮಾರಂಭ  ಪಟ್ಲದ ಮದ್ರಸ ಹಾಲ್ ನಲ್ಲಿ ಜರುಗಿತು.
ಪಟ್ಲ ಮಸೀದಿಯ ಮುದರ್ರಿಸ್ ಹಾಗು ಸಹ ಖತೀಬರಾದ ಅಬೂ ಮುಖ್ತಾರ್ ಸಖಾಫಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಫೈಝಿ ಉಸ್ತಾದರ ವ್ಯಕ್ತಿತ್ವ, ಸರಳ ಸ್ವಭಾವ ನಮಗೆ ಮಾದರಿ ಅಂದರು. ಸುನ್ನತ್ ಜಮಾಅತಿನ ಆಶಯಾದರ್ಶಗಳನ್ನು ಕಿಂಚಿತ್ತೂ ಸಡಿಲ ಮನೋಭಾವ ತೋರಿಸದೆ ಎದೆಗಾರಿಕೆಯೊಂದಿಗೆ ಹೇಳುವ ವ್ಯಕ್ತಿತ್ವ ಅವರದಾಗಿದೆ ಎಂದು ತಿಳಿಸಿದರು. ಪಟ್ಲ ಮೋಙಂ ಫೈಝಿ ಉಸ್ತಾದರು ಮುಖ್ಯ ಪ್ರಭಾಷಣ ನಡೆಸಿ ಹಜ್ ಎಂಬುದು ಇಸ್ಲಾಮಿನ ಮೂಲಭೂತ ಕಾರ್ಯಗಳಲ್ಲೊಂದಾಗಿದ್ದು ಸಾಧ್ಯವಿರುವವರು ಆಯುಷ್ಯದಲ್ಲಿ ಒಮ್ಮೆ ಹಜ್ ನಿರ್ವಹಿಸುವುದು ಕಡ್ಡಾಯವಾಗಿದೆ ಅಂದರು. ಬಳಿಕ ಪಟ್ಲ ಮಸೀದಿ ಮದ್ರಸದ ಆಡಳಿತ ಸಮಿತಿ, ಎಸ್ಸೆಸ್ಸೆಫ್ ಪಟ್ಲ ಶಾಖೆ ಹಾಗು ಪಳ್ಳಿ ದರ್ಸ್ ವಿದ್ಯಾರ್ಥಿಗಳ ವತಿಯಿಂದ ಹಜ್ ಯಾತ್ರೆಗೆ ಹೊರಟಿರುವ ಪಟ್ಲ ಉಸ್ತಾದರಿಗೆ ಹಾಗು ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಮಾಜಿ ಅಧ್ಯಕ್ಷರೂ, ಎಸ್ಸೆಸ್ಸೆಫ್ ದ.ಕ ಜಿಲ್ಲಾ ಹಾಲಿ ನಾಯಕರಾದ ಸಯ್ಯಿದ್ ಖುಬೈಬ್ ತಂಗಳ್ ರವರಿಗೆ ಸನ್ಮಾನಿಸಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಸಯ್ಯಿದ್ ಮದನಿ ಉಳ್ಳಾಲ ದರ್ಗಾ ಸಮಿತಿ ಸದಸ್ಯರಾದ ಮೊಯ್ದಿನ್, ಮದ್ರಸದ ಅಧ್ಯಾಪಕರಾದ ಶಾಫಿ ಸಖಾಫಿ, ಉಪಾಧ್ಯಕ್ಷ ಹಾರಿಸ್, ಪ್ರಧಾನ ಕಾರ್ಯದರ್ಶಿ ಸದ್ದಾಂ ಕಲ್ಲಾಪು, ಸಮಿತಿ ಸದಸ್ಯರಾದ ಯೂಸುಫ್, ಎಸ್ಸೆಸ್ಸೆಫ್ ಪಟ್ಲ ಶಾಖಾಧ್ಯಕ್ಷರಾದ ಮುಸ್ತಫ, ಪ್ರಧಾನ ಕಾರ್ಯದರ್ಶಿ ಸಾಲಿಂ ಹಾಗು ಮದ್ರಸ ಮತ್ತು ಪಳ್ಳಿ ದರ್ಸ್ ವಿದ್ಯಾರ್ಥಿಗಳು, ಊರ ಹಿರಿಯರು ಜಮಾಅತ್ ಬಾಂಧವರು ಉಪಸ್ಥಿತರಿದ್ದರು. ಮದ್ರಸ ಮುಖ್ಯೋಪಾಧ್ಯಾಯರಾದ ಮುನೀರ್ ಲತೀಫಿ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಮದ್ರಸ ಅಧ್ಯಾಪಕರಾದ ನವಾಝ್ ಸಖಾಫಿ ಉಳ್ಳಾಲ ಸ್ವಾಗತಿಸಿ ಕಾರ್ಯಕ್ರಮದ ಕೊನೆಗೆ ಧನ್ಯವಾದಗೈದರು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.