ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಉಳ್ಳಾಲ ಝೋನ್ ಇದರ ಆಶ್ರಯದಲ್ಲಿ ಬ್ರಹತ್ ಉಲಮಾ ಸಮ್ಮಿಲನ ತೊಕ್ಕೋಟುವಿನ ತಾಜುಲ್ ಉಲಮಾ ಜುಮಾ ಮಸೀದಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು.
ಉಳ್ಳಾಲ ಝೋನ್ ಅಧ್ಯಕ್ಷರಾದ ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಿದರು. ಶರೀಫ್ ಸಅದಿ ಸುಂದರಿಭಾಗ್ ಕಾರ್ಯಕ್ರಮ ಉದ್ಘಾಟಿಸಿದರು.
ಜಂಇಯ್ಯತುಲ್ ಉಲಮಾ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಎಸ್. ಪಿ .ಹಂಝ ಸಖಾಫಿ ಮುಖ್ಯ ಭಾಷಣ ನಡೆಸಿದರು.
ಸಯ್ಯಿದ್ ಮದನಿ ಮೊಹಲ್ಲಾ ಒಕ್ಕೂಟ ಉಳ್ಳಾಲ ಇದರ ಅಧ್ಯಕ್ಷರಾದ ಪಿ ಎಸ್ ಎಂ ಶಿಹಾಬುದ್ದೀನ್ ಸಖಾಫಿ ಫಿಕ್ಹ್ ತರಗತಿ ನಡೆಸಿಕೊಟ್ಟರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಸುನ್ನೀ ಯವ ಜನ ಸಂಘ ಉಳ್ಳಾಲ ಸೆಂಟರ್ ಅಧ್ಯಕ್ಷರಾದ ಸಯ್ಯಿದ್ ಜಲಾಲ್ ತಂಗಳ್, ತಲಪಾಡಿ ರೇಂಜ್ ಅಧ್ಯಕ್ಷರಾದ ಬಶೀರ್ ಅಹ್ಸನಿ ತೋಡಾರ್, ಉಳ್ಳಾಲ ರೇಂಜ್ ಪ್ರಧಾನ ಕಾರ್ಯದರ್ಶಿ ಯೂನುಸ್ ಇಮ್ದಾದಿ ಹಾಗು ಉಳ್ಳಾಲ ಝೋನ್ ವ್ಯಾಪ್ತಿಯ ಉಲಮಾಗಳು ಉಪಸ್ಥಿತರಿದ್ದರು. ಝೋನ್ ಪ್ರಧಾನ ಕಾರ್ಯದರ್ಶಿ ಮುನೀರ್ ಸಖಾಫಿ ಸಾಲೆತ್ತೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
Comments
Post a Comment