Skip to main content

ನಾಳೆ ಹುಬ್ಬುರ್ರಸೂಲ್ ಕಾನ್ಫರೆನ್ಸ್:ಮುಖ್ಯ ಅತಿಥಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ

ನಾಳೆ ಹುಬ್ಬುರ್ರಸೂಲ್ ಕಾನ್ಫರೆನ್ಸ್:ಮುಖ್ಯ ಅತಿಥಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ



ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ರಾಜ್ಯ ಸಮಿತಿಯ ವತಿಯಿಂದ ಪ್ರವಾದಿ ಮುಹಮ್ಮದ್ (ಸ)ರವರ ಜನ್ಮ ದಿನಾಚರಣೆಯ ಅಂಗವಾಗಿ ಮಂಗಳೂರು ನೆಹರೂ ಮೈದಾನದಲ್ಲಿ ನಾಳೆ ನವೆಂಬರ್ 7 ರಂದು ಗುರುವಾರ ಹುಬ್ಬುರ್ರಸೂಲ್ ಕಾನ್ಫರೆನ್ಸ್ ಹಾಗೂ ಮೀಲಾದ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ ಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಅಪರಾಹ್ನ 1ಘಂಟೆಗೆ ಸ್ವಾಗತ ಸಮಿತಿ ಅಧ್ಯಕ್ಷ ಎಸ್ ಕೆ ಖಾದರ್ ಹಾಜಿ ಧ್ವಜಾರೋಹಣ ನಡೆಸುವರು. 2 ಗಂಟೆಗೆ ಎಸ್ ವೈ ಎಸ್, ಎಸ್ಸೆಸ್ಸೆಫ್, ಮುಅಲ್ಲಿಮ್ ಸಂಘಟನೆಗಳ ವತಿಯಿಂದ ನಗರದಲ್ಲಿ ಮೀಲಾದ್ ರಾಲಿ ನಡೆಯಲಿದ್ದು ಸುನ್ನೀ ಕೋ ಆರ್ಡಿನೇಶನ್ ಕಮಿಟಿ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ ಚಾಲನೆ ನೀಡುವರು.
ಸಂಜೆ 4 ಗಂಟೆಗೆ ಎಸ್ ವೈ ಎಸ್ ರಾಜ್ಯಾಧ್ಯಕ್ಷ ಜಿಎಂ ಮುಹಮ್ಮದ್ ಕಾಮಿಲ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ
ಕಾರ್ಯಕ್ರಮ ಪ್ರಾರಂಭವಾಗಲಿದ್ದು ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ದುಆ ನೇರವೇರಿಸಲಿದ್ದಾರೆ. ಕರ್ನಾಟಕ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷ ತಾಜುಲ್ ಫುಖಹಾ ಬೇಕಲ್ ಇಬ್ರಾಹಿಮ್ ಮುಸ್ಲಿಯಾರ್ ಉದ್ಘಾಟಿಸಲಿದ್ದು ಸುಲ್ತಾನುಲ್ ಉಲಮಾ ಎ ಪಿ ಉಸ್ತಾದ್ ಮುಖ್ಯ ಭಾಷಣ ಮಾಡಲಿದ್ದಾರೆ. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಪೇರೋಡ್ ಅಬ್ದುಲ್ ರಹಿಮಾನ್ ಸಖಾಫಿ ಹುಬ್ಬುರ್ರಸೂಲ್ ಭಾಷಣ ಮಾಡಲಿದ್ದಾರೆ. ಝೈನುಲ್ ಉಲಮಾ ಮಾಣಿ ಉಸ್ತಾದ್, ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್, ತೋಕೆ ಮುಹ್ಯಿದ್ದೀನ್ ಸಖಾಫಿ, ಸಂದೇಶ ಭಾಷಣ ಮಾಡಲಿದ್ದಾರೆ.
ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ, ಮುಅಲ್ಲಿಮೀನ್, ಎಸ್ಸೆಸ್ಸೆಫ್, ಎಸ್.ಎಂ.ಎ., ಎಸ್.ಇ.ಡಿ.ಸಿ., ಮುಸ್ಲಿಂ ಜಮಾಅತ್, ಕೆಸಿಎಫ್ ಸಂಘಟನೆಗಳ ನಾಯಕರು ಶುಭ ಹಾರೈಸಿ ಮಾತನಾಡಲಿರುವರು.
ಕರ್ನಾಟಕ ಮಾಜಿ ಸಚಿವ ಯುಟಿ ಕಾದರ್, ವಿಧಾನ ಪರಿಷತ್ ಸದಸ್ಯ ಬಿ ಎಂ ಫಾರೂಕ್
ಯೇನೆಪೋಯಾ ವಿ ವಿ ಕುಲಪತಿ ವೈ ಅಬ್ದುಲ್ಲ ಕುಂಞಿ ಹಾಜಿ, ಮುಸ್ಲಿಂ ಜಮಾತ್ ಪ್ರದಾನ ಕಾರ್ಯದರ್ಶಿ ಶಾಫಿ ಸಆದಿ, ಕೆ ಸಿ ಎಫ್ ಅಂತಾರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಾ. ಹಾಜಿ ಶೇಖ್ ಬಾವ ಅಬೂಧಾಬಿ, ಹಾಜಿ ಎಸ್.ಎಂ.ರಶೀದ್ ಮುಂತಾದ ನಾಯಕರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು
ಹಾಫಿಳ್ ಯಾಕೂಬ್ ಸಅದಿ ನಾವೂರು
(ಮೀಡಿಯಾ ಕಾರ್ಯದರ್ಶಿ ಹುಬ್ಬುರ್ರಸೂಲ್ ಸಮಿತಿ ) ತಿಳಿಸಿದ್ದಾರೆ

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.