Skip to main content

ಮಂಗಳೂರು ತಾಲೂಕು ಸಖಾಫಿ ಸಂಗಮ ಹಾಗೂ ವಾರ್ಷಿಕ ಮಹಾ ಸಭೆ

ಮಂಗಳೂರು ತಾಲೂಕು ಸಖಾಫಿ ಸಂಗಮ ಹಾಗೂ ವಾರ್ಷಿಕ ಮಹಾ ಸಭೆ


ಕರ್ನಾಟಕ ರಾಜ್ಯ ಸಖಾಫಿ ಕೌನ್ಸಿಲ್ ಮಂಗಳೂರು ತಾಲೂಕು ಇದರ ಸಖಾಫಿ ಸಂಗಮ ಹಾಗೂ ವಾರ್ಷಿಕ ಮಹಾಸಭೆ ಜನವರಿ 28 ರಂದು ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ಅಧ್ಯಕ್ಷರಾದ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ಪಡೀಲ್ ಇಲ್ಮ್ ಸೆಂಟರ್ ಮರ್ಹೂಂ ಬೀರಾನ್ ಕುಟ್ಟಿ ಉಸ್ತಾದ್ ವೇದಿಕೆಯಲ್ಲಿ ನಡೆಯಿತು. ಕೌನ್ಸಿಲ್ ಕೋಶಾಧಿಕಾರಿ ಮುಹಮ್ಮದ್ ಸಖಾಫಿ ಮೊಂಟೆಪದವು ದುಆ ನೆರವೇರಿಸಿದರು. ಉಪಾಧ್ಯಕ್ಷ ಮುಹಮ್ಮದ್ ಸಖಾಫಿ ಪೂಡಲ್ ಕಾರ್ಯಕ್ರಮ ಉದ್ಘಾಟಿಸಿದರು.  ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಉಸ್ತಾದರು ಅಧ್ಯಕ್ಷ ಭಾಷಣ ಮಾಡಿ ಹಿಂದಿನ ಎರಡು ವರ್ಷಗಳ ಅವಧಿಯಲ್ಲಿ ತಾಲೂಕು ಸಖಾಫಿ ಕೌನ್ಸಿಲ್ ನಡೆಸಿದ ಕಾರ್ಯಕ್ರಮಗಳ ಕುರಿತು ಮೆಲುಕು ಹಾಕಿ ಮಾತನಾಡುತ್ತಾ ಅದಕ್ಕಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು. "ಮರ್ಕಝ್ ಮತ್ತು ಅದರ ಕಾರ್ಯ ವೈಖರಿಗಳು" ಎಂಬ ವಿಷಯದಲ್ಲಿ ದ.ಕ ಜಿಲ್ಲಾ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ, ದಾರುಲ್ ಮುಸ್ತಫ ಮೋರಲ್ ಅಕಾಡೆಮಿ ಇದರ ಸ್ಥಾಪಕರಾದ ಟಿ ಎಂ ಮುಹ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ ಮಾತನಾಡಿ ಗುರು ಶಿಷ್ಯ ಸಂಬಂಧ ಅತ್ಯಂತ ಪವಿತ್ರವಾದುದು, ನಿಶ್ಕಲಂಕ ಮನೋಭಾವದಿಂದ ಗುರುವನ್ನು ಸ್ವೀಕರಿಸಿದವರು ಪರಾಜಯ ಹೊಂದಲಾರರು ಎಂದು ತಿಳಿಸಿದರು. ರಾಜ್ಯ ಸಖಾಫಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಕೆ ಕೆ ಎಂ ಕಾಮಿಲ್ ಸಖಾಫಿಯವರ ನೇತೃತ್ವದಲ್ಲಿ ಇತ್ತೀಚೆಗೆ ನಮ್ಮಿಂದ ಅಗಲಿದ ಕ್ಯಾಲಿಕಟ್ ಕಾರಂದೂರ್ ಮರ್ಕಝಿನ ದೀರ್ಘ ಕಾಲ ಮುದರ್ರಿಸರಾದ ಉಸ್ತಾದ್ ಬೀರಾನ್ ಕುಟ್ಟಿ ಮುಸ್ಲಿಯಾರ್ ರವರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ನಡೆಯಿತು. ತಾಲೂಕು ಸಖಾಫಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಮಹ್ಬೂಬ್ ಸಖಾಫಿ ಕಿನ್ಯ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.
ಚುನಾವಣಾ ವೀಕ್ಷಕರಾಗಿ ಆಗಮಿಸಿದ ತಾಲೂಕು ಉಸ್ತುವಾರಿ ಅಬ್ದುರ್ರಶೀದ್ ಸಖಾಫಿ ಗಡಿಯಾರ ರವರ ನೇತೃತ್ವದಲ್ಲಿ ಹಾಲಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿ ಆಯ್ಕೆಗೆ ಚಾಲನೆ ನೀಡಲಾಯಿತು. 
ಮಂಗಳೂರು ತಾಲೂಕು ಸಖಾಫಿ ಕೌನ್ಸಿಲ್ ನೂತನಾಧ್ಯಕರಾಗಿ ಪಿ.ಎಸ್.ಎಂ ಶಿಹಾಬುದ್ದೀನ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ, ಕೋಶಾಧಿಕಾರಿಯಾಗಿ ರಫೀಕ್ ಮದನಿ ಅಲ್ ಕಾಮಿಲ್ ಆಯ್ಕೆಯಾದರು. ಸಂಘಟನಾ ಉಪಾಧ್ಯಕ್ಷರಾಗಿ ಮಹ್ಬೂಬ್ ಸಖಾಫಿ ಕಿನ್ಯ, ಅಧ್ಯಯನಾ ಉಪಾಧ್ಯಕ್ಷರಾಗಿ ಹನೀಫ್ ಸಖಾಫಿ ಕಿನ್ಯ, ಕ್ಷೇಮನಿಧಿ ಉಪಾಧ್ಯಕ್ಷರಾಗಿ ಮುತ್ತಲಿಬ್ ಸಖಾಫಿ ಬೆಳ್ಮ, ಸಂಘಟನಾ ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಉಳ್ಳಾಲ, ಅಧ್ಯಯನಾ ಕಾರ್ಯದರ್ಶಿಯಾಗಿ ನಿಸಾರ್ ಸಖಾಫಿ ಉಳ್ಳಾಲ, ಕ್ಷೇಮನಿಧಿ ಕಾರ್ಯದರ್ಶಿಯಾಗಿ ಹಕೀಂ ಸಖಾಫಿ ಕಾಟಿಪಳ್ಳ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ನವಾಝ್ ಸಖಾಫಿ ಅಡ್ಯಾರ್ ಪದವು, ಪೂಡಲ್ ಮುಹಮ್ಮದ್ ಸಖಾಫಿ, ಮುಹ್ಯಿದ್ದೀನ್ ಸಖಾಫಿ ನ್ಯೂಪಡ್ಪು, ಜುನೈದ್ ಸಖಾಫಿ ಬೆಳ್ಮ, ಫಾರೂಕ್ ಸಖಾಫಿ ಮದನಿನಗರ, ಶೌಕತ್ ಸಖಾಫಿ ಬೆಳ್ಮ, ಕರೀಂ ಸಖಾಫಿ ಬೈತಾರ್, ಉಸ್ಮಾನ್ ಸಖಾಫಿ ಕಣ್ಣೂರು, ಬಶೀರ್ ಸಖಾಫಿ ಉಳ್ಳಾಲ, ಹನೀಫ್ ಸಖಾಫಿ ನಾಟೆಕಲ್, ಹಾರಿಸ್ ಸಖಾಫಿ ಕಿನ್ಯ, ಶರೀಫ್ ಸಖಾಫಿ ಉರುಮಣೆ, ಅಝೀಝ್ ಸಖಾಫಿ ಉಳ್ಳಾಲ, ಫಾರೂಕ್ ಸಖಾಫಿ ಹಂಡೇಲು, ಹೈದರ್ ಸಖಾಫಿ ಇನೋಳಿ, ಸೈಫುದ್ದೀನ್ ಸಖಾಫಿ ಉಳ್ಳಾಲ, ಇಬ್ರಾಹಿಂ ಸಖಾಫಿ ತಲಪಾಡಿ, ಫಾರೂಕ್ ಸಖಾಫಿ ಕಾಟಿಪಳ್ಳ, ರಫೀಕ್ ಸಖಾಫಿ ಪಾವೂರು, ಹಸನ್ ಸಖಾಫಿ ಕೆಸಿರೋಡ್ ರವರನ್ನು ಆರಿಸಲಾಯಿತು.
ದ.ಕ ಜಿಲ್ಲಾ ಕೌನ್ಸಿಲರುಗಳಾಗಿ ಡಾ ಎಂ ಎಸ್ ಎಂ ಅಬ್ದುರ್ರಶೀದ್ ಝೈನಿ ಅಲ್ ಕಾಮಿಲ್ ಸಖಾಫಿ, ಕೆ ಕೆ ಎಂ ಕಾಮಿಲ್ ಸಖಾಫಿ, ಅಬ್ದುಸ್ಸತ್ತಾರ್ ಸಖಾಫಿ, ಮಹ್ಬೂಬ್ ಸಖಾಫಿ ಕಿನ್ಯ, ಅಶ್ಅರಿಯ್ಯಃ ಮುಹಮ್ಮದ್ ಅಲಿ ಸಖಾಫಿ, ಅಬೂಸ್ವಾಲಿಹ್ ಕಾಮಿಲ್ ಸಖಾಫಿ, ಉಸ್ಮಾನ್ ಸಖಾಫಿ ಕಣ್ಣೂರು, ಪೂಡಲ್ ಮುಹಮ್ಮದ್ ಸಖಾಫಿ, ಮುಹಮ್ಮದ್ ಸಖಾಫಿ ಮೊಂಟೆಪದವು, ಅಬ್ದುಲ್ ಅಝೀಝ್ ಸಖಾಫಿ ಮುಳ್ಳುಗುಡ್ಡೆ ಇವರನ್ನು ಆಯ್ಕೆ ಮಾಡಲಾಯಿತು.
ಬಳಿಕ ನೂತನಾಧ್ಯಕ್ಷರಾದ ಪಿ ಎಸ್ ಎಂ ಶಿಹಾಬುದ್ದೀನ್ ಸಖಾಫಿ ಉಳ್ಳಾಲ ಮಾತನಾಡಿದರು. ನೂತನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಧನ್ಯವಾದಗೈದರು.









Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.