Skip to main content

ಎ ಸಿ ಎ ಕಾಂತಪುರಂ ಮುಫತ್ತಿಷ್ ಉಸ್ತಾದ್ ಮರೆಯಲಸಾಧ್ಯವಾದ ವ್ಯಕ್ತಿತ್ವ


ಉಳ್ಳಾಲದ ಸಯ್ಯಿದ್ ಮದನಿ ಅರೆಬಿಕ್ ಟ್ರಸ್ಟ್ ಅಧೀನದಲ್ಲಿ ಹಲವಾರು ವರ್ಷಗಳು ಮುಫತ್ತಿಷ್ ಆಗಿ ಸೇವೆಗೈದಿದ್ದ ಎ ಸಿ ಎ ಕಾಂತಪುರಂ ಉಸ್ತಾದ್ ಇಂದಿಗೂ ಉಳ್ಳಾಲದ ಜನಮಾನಸದಲ್ಲಿ ಅಮರರಾಗಿರುವರು. ಭಾರತದ ಮಹೋನ್ನತ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಉಸ್ತಾದರ ಪ್ರಾರಂಭಿಕ ಶಿಷ್ಯರೂ, ತನ್ನೂರಿನವರೂ ಆದ ಎಸಿಎ ಕಾಂತಪುರಂ ಅಬ್ದುಲ್ ರಹ್ಮಾನ್ ಮುಸ್ಲಿಯಾರ್ ಪ್ರಗಲ್ಭ ವಿದ್ವಾಂಸರೂ, ಅಗಾಧ ಜ್ಞಾನಿಯೂ ಆಗಿದ್ದರು. ಉಸ್ತಾದರು ಉಳ್ಳಾಲದಲ್ಲಿ ಮುಫತ್ತಿಷ್ ಆಗಿದ್ದಂತಹ ಸಂದರ್ಭದಲ್ಲಿ ಎಲ್ಲರ ಪ್ರೀತಿಗೆ, ಮೆಚ್ಚುಗೆಗೆ ಪಾತ್ರರಾಗಿದ್ದರು.  ಮದ್ರಸ ವ್ಯವಸ್ಥೆಯಲ್ಲಿ ಹೊಸ ಕ್ರಾಂತಿಯನ್ನು ಸ್ರಷ್ಟಿಸಿದ್ದರು. ಮದ್ರಸ ವಿದ್ಯಾರ್ಥಿಗಳಿಗೂ, ಅಧ್ಯಾಪಕರಿಗೂ ಕಲಿಕಾ ವ್ಯವಸ್ಥೆಯಲ್ಲಿ ನವ ಹುಮ್ಮಸ್ಸು, ನವ ಚೈತನ್ಯವನ್ನು ತುಂಬಿದ್ದರು. ಅದೇ ಕಾರಣದಿಂದ ಅಂದಿನ ವಿದ್ಯಾರ್ಥಿಗಳಿಗೂ, ಅಧ್ಯಾಪಕರಿಗೂ, ಊರವರಿಗೂ ಉಸ್ತಾದರೊಂದಿಗೆ ಅಗಾಧ ಗೌರವ ಈಗಲೂ ಇದೆ. ನನ್ನ ಪೂರ್ತಿ ಮದ್ರಸ ಜೀವನದ ಮುಫತ್ತಿಶ್ ಆಗಿದ್ದ ಉಸ್ತಾದರು ಅವರು ಮದ್ರಸಕ್ಕೆ ಇಂದು ಭೇಟಿಯಾಗುವರು ಎಂಬ ವಾರ್ತೆ ಮದ್ರಸ ಅಧ್ಯಾಪಕರಿಂದ ತಿಳಿದರೆ ಕಲಿಕೆಯಲ್ಲಿ ಎಲ್ಲರಿಗಿಂತ ಮುಂದೆ ಇದ್ದರೂ ಎದೆ ನಡುಕ ಪ್ರಾರಂಭವಾಗುತ್ತಿತ್ತು. ನಾನು ಅಕ್ಕರೆಕೆರೆ ಮದ್ರಸದಲ್ಲಿ ನಾಲ್ಕನೇ ತರಗತಿಯಲ್ಲಿದ್ದಾಗ ತಜ್ವೀದ್ ನಿಯಮದ ಮತ್ತು ಅಕ್ಷರ ಉಚ್ಛಾರಣೆಯ ಕುರಿತು ಒಂದೊಂದು ಪ್ರಶ್ನೆ ಕೇಳಿದ್ದರು. ಸಲೀಸಾಗಿ ಅದರ ಉತ್ತರವೂ ನೀಡಿದ್ದೆ. ಮತ್ತಷ್ಟು ಕಲಿಕಾ ಪ್ರಗತಿಗಾಗಿ ಅಂದು ನನ್ನ ಮುಂದೆ ನನ್ನ ಬಗ್ಗೆ ಪ್ರೋತ್ಸಾಹದ ಮಾತುಗಳನ್ನಾಡಿದ್ದರು. ಇಂದಿಗೂ ಅದು ನನ್ನ ಮನಃ ಪಟಲದಲ್ಲಿ ಚಿರಾಯುವಾಗಿದೆ. ಮದ್ರಸ ಜೀವನದ ನಂತರ ಸರಿ ಸುಮಾರು 20 ವರ್ಷಗಳ ಬಳಿಕ ಎರಡು ವರ್ಷಗಳ ಮುಂಚೆ ಉಸ್ತಾದರು ಉಳ್ಳಾಲ ದರ್ಗಾ ಸಂದರ್ಶನಕ್ಕೆ ಬಂದಿದ್ದಾಗ ಉಳ್ಳಾಲ ಮೇಲಂಗಡಿಯಲ್ಲಿ ಉಸ್ತಾದರನ್ನು ಮುಖತಃ ಭೇಟಿಯಾಗಿ ಮಾತನಾಡಿದ್ದೆ. ಇಂದು ಉಸ್ತಾದರು ನಮ್ಮಿಂದ ಕಣ್ಮರೆಯಾದ ವಿಷಯ ತಿಳಿದು ಬಂತು. ಸರಳ ಸಜ್ಜನಿಕೆಯ, ಸದಾ ಹಸನ್ಮುಖಿ, ನಗುಮುಖದ, ಮದ್ರಸ ಶಿಕ್ಷಣ ರಂಗಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡಿದ ಎಸಿ ಎ ಕಾಂತಪುರಂ ಉಸ್ತಾದ್ ಇನ್ನು ನೆನಪು ಮಾತ್ರ.

ಅಲ್ಲಾಹನು ಉಸ್ತಾದರಿಗೆ ಮಗ್ಫಿರತ್, ಮರ್ಹಮತ್ ನೀಡಿ ಅನುಗ್ರಹಿಸಲಿ.  ಉಸ್ತಾದರ ಖಬರ್ ಹಾಗು ಪಾರತ್ರಿಕ ಬದುಕು ಸಂತೋಷಗೊಳಿಸಲಿ. ಉಸ್ತಾದರ ಪದವಿಯನ್ನು ಅಲ್ಲಾಹನು ಉನ್ನತಿಗೇರಿಸಲಿ. ಸ್ವರ್ಗೋದ್ಯಾನದಲ್ಲಿ ಉಸ್ತಾದರನ್ನು ಮತ್ತು ನಮ್ಮನ್ನು ಒಗ್ಗೂಡಿಸಲಿ. ಆಮೀನ್.

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.