Skip to main content

ಆ ಭಾಗ್ಯವಂತರು ನಮ್ಮನ್ನಗಲಿ ಇಂದಿಗೆ 6 ವರ್ಷ



ಆ  ಭಾಗ್ಯವಂತರು ನಮ್ಮನ್ನಗಲಿ ಇಂದಿಗೆ 6 ವರ್ಷ !

ಪ್ರತಿವರ್ಷ ರಮಳಾನ್ ಒಂದು ಆಯಿತೆಂದರೆ ಅವರು ಮೊದಲ ರಾತ್ರಿಯೇ ಖರ್ಜುರದ ಕಟ್ಟನ್ನು ಹಿಡಿದು ಸಮೀಪದ ಮಸೀದಿಯ ಉಸ್ತಾದರುಗಳಿಗೆಲ್ಲಾ ಅದನ್ನು ವಿತರಣೆ ಮಾಡುತ್ತಿದ್ದರು. 

ಹಬೀಬ್  ﷺ ರ ಕುಟುಂಬಸ್ಥರಾದ ಸಾದತ್ ಗಳನ್ನು, ಧಾರ್ಮಿಕ ಉಲಮಾಗಳನ್ನು, ಮುತಅಲ್ಲಿಂಗಳನ್ನು, ಕಂಡರೆ ಅವರಿಗೆ ತುಂಬಾ ಪ್ರೀತಿ ಮತ್ತು ಆರ್ಥಿಕ ನೆರವು ನೀಡಿವುದಲ್ಲದೆ ಅವರನ್ನು ಮನೆಗೆ ಕರೆದುಕೊಂಡು ಹೋಗಿ ಆಹಾರ   ನೀಡುವುದರಲ್ಲಿ ಅವರು ಎತ್ತಿದ ಕೈ. 
ನಿತ್ಯ ನಿರಂತರ ಮಸೀದಿಯೊಂದಿಗೆ ಸಂಪರ್ಕ ಮತ್ತು ಜಮಾತ್ ಗಳಲ್ಲಿ ಮೊದಲ ಸ್ವಫ್ಫ್ ನಲ್ಲೇ ಅವರ ಉಪಸ್ಥಿತಿ.
ಸುನ್ನತ್ ಜಮಾತ್ ವಿರೋಧಿಗಳನ್ನು ತನ್ನ ಗಟ್ಟಿ ಧ್ವನಿಯಲ್ಲಿ ಗದರಿಸುವ ಮನೋಧಾರ್ಡ್ಯತೆ. 

ಇಂತಹ ಹತ್ತು ಹಲವಾರು ಉತ್ತಮ ಕಾರ್ಯ ತನ್ನ ಜೀವಿತಾವಧಿಯಲ್ಲಿ ಮಾಡಲು ಭಾಗ್ಯ ದೊರೆತ ಒಬ್ಬ ಮಹಾನ್  ವ್ಯಕ್ತಿ........ 
ಅವರೇ *ಮರಹೂಂ  ಯು.ಟಿ ಇಲ್ಯಾಸ್ ಹಾಜಿ ಮುಕ್ಕಚ್ಚೇರಿ*
 
ಈ ಎಲ್ಲಾ ಒಳಿತುಗಳ ಕಾರಣದಿಂದಲೇ  ರಮಳಾನ್ 27 ರ ಶುಕ್ರವಾರ ಲೈಲತುಲ್ ಖದ್ರ್ ದಿನ ಅಪಾರ ಪುಣ್ಯ ತುಂಬಿದ ರಾತ್ರಿ ಅವರು ಮರಣ ಹೊಂದುವ ಭಾಗ್ಯ ಪಡೆದುಕೊಂಡರು. 

ಅವರು ನಮ್ಮನ್ನಗಲಿ ಇಂದಿಗೆ ಆರು ವರ್ಷ !

ಅವರಿಗಾಗಿ ನಾವು ದುಆ ಮಾಡಬೇಕಾಗಿದೆ. 

ಅಲ್ಲಾಹನು ಅವರ ಸ್ಥಾನವನ್ನು ಉನ್ನತಿಗೇರಿಸಲಿ - ಆಮೀನ್ 

 SSF Ombathukere unit


✍️Mustafa Master UAE

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.