Skip to main content

ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ


ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಇದರ ಮಹಾಸಭೆಯು ಉಳ್ಳಾಲ ತೋಟದ ಇಶಾಅತುಸ್ಸುನ್ನಃ ಮದ್ರಸದಲ್ಲಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಜೆಪ್ಪು ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು.

ಸುಂದರಭಾಗ್ ಬದ್ರಿಯ್ಯ ಜುಮಾ ಮಸೀದಿ ಖತೀಬರಾದ ಶರೀಫ್ ಸಅದಿ ಮೀಯಪದವು ದುಆ ನೆರವೇರಿಸಿದರು. ರೇಂಜ್ ಪರೀಕ್ಷಾ ವಿಭಾಗದ ಅಧ್ಯಕ್ಷರಾದ ಯೂನುಸ್ ಇಮ್ದಾದಿ ಅಲ್ ಫುರ್ಖಾನಿ ಸಭೆಯನ್ನು ಉದ್ಘಾಟಿಸಿದರು. 2021-22 ನೇ ಸಾಲಿನ ವಿವಿಧ ವಿಭಾಗದ ವಾರ್ಷಿಕ ವರದಿಗಳು ಮತ್ತು  ಲೆಕ್ಕಪತ್ರ ಮಂಡಿಸಲಾಯಿತು.

 ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುರ್ರಹ್ಮಾನ್ ಮದನಿ ಜೆಪ್ಪು ಉಸ್ತಾದರು ಅಧ್ಯಕ್ಷತಾ ಭಾಷಣ ಮಾಡಿದರು.
ಬಳಿಕ ಹಾಲಿ ಸಮಿತಿಯನ್ನು ವಿಸರ್ಜಿಸಿ ನೂತನ ಸಮಿತಿ ಆಯ್ಕೆ ಪ್ರಕ್ರಿಯೆ ನಡೆಯಿತು.

 ಗೌರವಾಧ್ಯಕ್ಷರಾಗಿ ಅಬೂಝಿಯಾದ್ ಮದನಿ ಪಟ್ಟಾಂಬಿ ಉಸ್ತಾದ್, ಅಧ್ಯಕ್ಷರಾಗಿ ಜಲಾಲುದ್ದೀನ್ ಮದನಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಂ ಮುಹ್ಯಿದ್ದೀನ್ ಮದನಿ ಕಟ್ಟತ್ತಿಲ, ಕೋಶಾಧಿಕಾರಿಯಾಗಿ ಬಶೀರ್ ಸಖಾಫಿ ಉಳ್ಳಾಲ ಪುನರಾಯ್ಕೆಯಾದರು.
ಎಕ್ಸಾಂ, ಐಟಿ, ವೆಲ್ಫೇರ್ ವಿಭಾಗದ ಅಧ್ಯಕ್ಷರಾಗಿ ಯೂನುಸ್ ಇಮ್ದಾದಿ ಅಲ್ ಫುರ್ಖಾನಿ, ಕಾರ್ಯದರ್ಶಿಯಾಗಿ ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಸಹ ಕಾರ್ಯದರ್ಶಿಗಳಾಗಿ ಇರ್ಫಾನ್ ಫಾಳಿಲಿ ಮಂಚಿಲ, ಮುನೀರ್ ಲತೀಫಿ ಪಟ್ಲ, ವಿ.ಕೆ ಅಬ್ದುರ್ರಹ್ಮಾನ್ ಸಖಾಫಿ ಮುಕ್ಕಚ್ಚೇರಿ ಆಯ್ಕೆಯಾದರು.
ಮ್ಯಾಗಝಿನ್ ವಿಭಾಗದ ಅಧ್ಯಕ್ಷರಾಗಿ ಅಯ್ಯೂಬ್ ಮಹ್ಲರಿ ಕಾವಲ್ಕಟ್ಟೆ, ಕಾರ್ಯದರ್ಶಿಯಾಗಿ ರಫೀಕ್ ಸಅದಿ ಅಳೇಕಲ, ಸಹ ಕಾರ್ಯದರ್ಶಿಯಾಗಿ ವಿ.ಎ ಮುಹಮ್ಮದ್ ಸಖಾಫಿ ವಳವೂರು ರವರನ್ನು ಆರಿಸಲಾಯಿತು.
ಟ್ರೈನಿಂಗ್ ಮತ್ತು ಮಿಶನರಿ ವಿಭಾಗದ ಅಧ್ಯಕ್ಷರಾಗಿ ಎಂ ಶರೀಫ್ ಸಅದಿ ಮೀಯಪದವು, ಕಾರ್ಯದರ್ಶಿಯಾಗಿ ಇಬ್ರಾಹಿಂ ಸಖಾಫಿ ಸೆರ್ಕಳ, ಸಹ ಕಾರ್ಯದರ್ಶಿಯಾಗಿ ನಝೀರ್ ಮದನಿ ಮಾರ್ಗತಲೆ ಆಯ್ಕೆಯಾದರು. ಲೆಕ್ಕ ಪರಿಶೋಧಕರಾಗಿ ಸುಲೈಮಾನ್ ಉಸ್ತಾದ್ ಸಜಿಪ, ಇರ್ಶಾದ್ ಹನೀಫಿ ತೋಟರವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸಹಿತ ಅಯ್ಯೂಬ್ ಮಹ್ಲರಿ ಹಾಗು ಇಬ್ರಾಹಿಂ ಸಖಾಫಿ ಸೆರ್ಕಳ ಜಿಲ್ಲಾ ಕೌನ್ಸಿಲರ್ ಆಗಿ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಸ್ಸಮದ್ ಅಹ್ಸನಿ ಉಳ್ಳಾಲ, ಉಸ್ಮಾನ್ ಸಖಾಫಿ ಮಾರ್ಗತಲೆ, ಮುಸ್ತಫ ಸಅದಿ ತೋಟ ಹಾಗು ಮುಹಮ್ಮದ್ ಶರೀಫ್ ಹನೀಫಿ ದಾರಂದಬಾಗಿಲು ರವರನ್ನು ಆರಿಸಲಾಯಿತು.

ರೇಂಜ್ ನೂತನಾಧ್ಯಕ್ಷರಾಗಿ ಪುನರಾಯ್ಕೆಯಾದ ಜಲಾಲುದ್ದೀನ್ ಮದನಿ ಮಾತನಾಡಿದರು. ರೇಂಜ್ ಗೌರವಾಧ್ಯಕ್ಷರಾದ ಅಬೂಝಿಯಾದ್ ಮದನಿ ಪಟ್ಟಾಂಬಿ ಉಸ್ತಾದ್ ಹಾಗು ಇರ್ಫಾನ್ ಸಅದಿ ಶುಭ ಹಾರೈಸಿ ಮಾತನಾಡಿದರು.
ರೇಂಜ್ ಪ್ರಧಾನ ಕಾರ್ಯದರ್ಶಿಯಾದ  ಕೆ.ಎಂ ಮುಹ್ಯಿದ್ದೀನ್ ಮದನಿ ಕಟ್ಟತ್ತಿಲ ಸ್ವಾಗತಿಸಿ, ಕಾರ್ಯಕ್ರಮದ ಕೊನೆಯಲ್ಲಿ ಧನ್ಯವಾದ ಮಾಡಿದರು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.