ಅಕ್ಟೋಬರ್ ತಿಂಗಳಲ್ಲಿ ನಡೆಯುವ ಮರ್ಕಝ್ ನಾಲೇಜ್ ಸಿಟಿ ಉದ್ಘಾಟನೆ ನಿಮಿತ್ತ ಮರ್ಕಝ್ ಸರ್ಕಲ್ ಉಳ್ಳಾಲ ವತಿಯಿಂದ ಸಮಾವೇಶ ಹಾಗೂ ಉಳ್ಳಾಲ ಸರ್ಕಲ್ ಯೋಜನಾ ಸಮಿತಿ ಅಸ್ತಿತ್ವಕ್ಕೆ.
ಅಕ್ಟೋಬರ್ ತಿಂಗಳಲ್ಲಿ ನಡೆಯುವ ಮರ್ಕಝ್ ನಾಲೇಜ್ ಸಿಟಿ ಉದ್ಘಾಟನೆ ನಿಮಿತ್ತ ಮರ್ಕಝ್ ಸರ್ಕಲ್ ಉಳ್ಳಾಲ ವತಿಯಿಂದ ಸಮಾವೇಶ ಹಾಗೂ ಉಳ್ಳಾಲ ಸರ್ಕಲ್ ಯೋಜನಾ ಸಮಿತಿ ಅಸ್ತಿತ್ವಕ್ಕೆ. ಮಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಉಸ್ತಾದ್ ನೇತೃತ್ವದಲ್ಲಿ ಕೋಝಿಕ್ಕೋಡ್ ಜಿಲ್ಲೆಯ ಕೈದಪ್ಪೊಯಿಲ್ ಎಂಬಲ್ಲಿ ಸುಮಾರು ನೂರೈವತ್ತು ಏಕರೆ ಭೂಮಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮರ್ಕಝ್ ನಾಲೇಜ್ ಸಿಟಿಯ ಮೊದಲ ಹಂತದ ಉದ್ಘಾಟನಾ ಸಮಾರಂಭವು ಇದೇ ಅಕ್ಟೋಬರ್ ಕೊನೆಯ ವಾರ ನಡೆಯಲಿದ್ದು ಆ ಬಗ್ಗೆ ಕರ್ನಾಟಕದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಕಾರಂದೂರು ಮರ್ಕಝ್ ನಲ್ಲಿ ನಡೆದ ರಾಜ್ಯದ ಸುನ್ನೀ ಸಂಘಟನಾ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರಂತೆ ಬೆಂಗಳೂರು,ಮಂಗಳೂರು, ಕೊಡಗು ಮತ್ತು ಶಿವಮೊಗ್ಗಗಳಲ್ಲಿ ಅಕ್ಟೋಬರ್ ತಿಂಗಳಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ನಾಲೇಜ್ ಸಿಟಿಯ ಕಾರ್ಯ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ವಿವರಿಸಿ ಕೊಡಲಾಗುವುದು. ಸದರಿ ಸಮಾವೇಶಗಳಲ್ಲಿ ಮರ್ಕಝ್ ನಾಲೇಜ್ ಸಿಟಿ ಅಧ್ಯಕ್ಷ ಸುಲ್ತಾನುಲ್ ಉಲಮಾ ಎ. ಪಿ ಉಸ್ತಾದ್, ಸಯ್ಯಿದ್ ಅಲಿ ಬಾಫಖಿ ತಂಙಳ್, ಮಾನೇಜಿಂಗ್ ಡೈರೆಕ್ಟರ್ ಡಾ. ಅಬ್ದುಲ್ ಹಕೀಂ ಅಝ್ಹರಿ,ನಾಯಕರಾದ ಸಿ.ಮುಹಮ್ಮದ್ ಫೈಝಿ,ಸಯ್ಯಿದ್ ಮುಹಮ್ಮದ್ ತುರಾಬ್ ತಂಙಳ್, ಸಯ್ಯಿದ್ ಮುತ್ತನೂರ್ ತಂಙಳ್, ಡಾ.ಅಬ್ದುಲ್ ಸಲಾಂ, ಅಡ್ವಕೇಟ್ ತನ್ವೀರ್ ಮುಂತಾದವರ...