Skip to main content

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್ ಜೆ ಎಂ ಉಳ್ಳಾಲ ರೇಂಜ್ ವತಿಯಿಂದ ಮಾದಕ ದ್ರವ್ಯಗಳ ವಿರುದ್ದ ಜನ ಜಾಗೃತಿ ಸಭೆ ಹಾಗೂ ಎಸ್ ಬಿ ಎಸ್ ವಿದ್ಯಾರ್ಥಿಗಳ ಬಾಲ ಮಸೀರ ರ್ಯಾಲಿ


ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್ ಜೆ ಎಂ ಉಳ್ಳಾಲ ರೇಂಜ್ ವತಿಯಿಂದ ಮಾದಕ ದ್ರವ್ಯಗಳ ವಿರುದ್ದ ಜನ ಜಾಗೃತಿ ಸಭೆ ಹಾಗೂ ಎಸ್ ಬಿ ಎಸ್ ವಿದ್ಯಾರ್ಥಿಗಳ ಬಾಲ ಮಸೀರ ರ್ಯಾಲಿ ಉಳ್ಳಾಲದಲ್ಲಿ ನಡೆಯಿತು.

ಹಝ್ರತ್ ಸಯ್ಯಿದ್ ಮದನಿ ದರ್ಗಾ ಝಿಯಾರತಿನೊಂದಿಗೆ ಚಾಲನೆಗೊಂಡ ಕಾರ್ಯಕ್ರಮದಲ್ಲಿ ರೇಂಜ್ ಮಿಷನರಿ ವಿಭಾಗದ ಚೇರ್ಮಾನ್ ವಿ.ಎ ಸಖಾಫಿ ವಳವೂರು ದುಆ ನೆರವೇರಿಸಿದರು.

ಸ್ವಸ್ಥ ಸಮಾಜವನ್ನು ವಿನಾಶಕ್ಕೆ ತಳ್ಳುತ್ತಿರುವ ಲಹರಿ ಪದಾರ್ಥಗಳ ವಿರುದ್ಧ "ಲಹರಿಯ ಆವೇಶ ಸಮಾಜದ ವಿನಾಶ" ಎಂಬ ಘೋಷಣೆಯೊಂದಿಗೆ ಉಳ್ಳಾಲ ದರ್ಗಾ ವಠಾರದಿಂದ ಪ್ರಾರಂಭಗೊಂಡ ಎಸ್ ಬಿ ಎಸ್ ವಿದ್ಯಾರ್ಥಿಗಳ ಬಾಲ ಮಸೀರ ರ್ಯಾಲಿಯು ಮೇಲಂಗಡಿ, ಮಾಸ್ತಿಕಟ್ಟೆ ಜಂಕ್ಷನ್ ಮೂಲಕ ಸಾಗಿ  ಉಳ್ಳಾಲ ಪೇಟೆಯಲ್ಲಿ ಕೊನೆಗೊಂಡಿತು. ಈ ರ್ಯಾಲಿಯಲ್ಲಿ ಸಯ್ಯಿದ್ ಮದನಿ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಉಳ್ಳಾಲ ರೇಂಜ್ ಅಧೀನದ ಮದ್ರಸ ವಿದ್ಯಾರ್ಥಿಗಳು, ಅಧ್ಯಾಪಕರುಗಳು ಪಾಲ್ಗೊಂಡಿದ್ದರು.

ಬಳಿಕ ಉಳ್ಳಾಲ ಪೇಟೆ ಪುರಸಭಾ ಮೈದಾನದಲ್ಲಿ ನಡೆದ ಜನ ಜಾಗ್ರತಿ ಸಭೆಯಲ್ಲಿ ಮಾತನಾಡಿದ ಉಳ್ಳಾಲ ಎಸ್ ಐ ಪ್ರದೀಪ್ ಇತ್ತೀಚಿನ ದಿನಗಳಲ್ಲಿ ಅಪರಾಧ ಕ್ರತ್ಯಗಳು ಹೆಚ್ಚುತ್ತಿದ್ದು, ಮಾದಕ ದ್ರವ್ಯಗಳ ಬಳಕೆಯೇ ಇದಕ್ಕೆಲ್ಲಾ ಪ್ರಮುಖ ಕಾರಣವಾಗಿದೆ. ಮಾದಕ ವಸ್ತುಗಳ ಬಳಕೆಯ ವಿರುದ್ಧ ಧರ್ಮ ಗುರುಗಳ ನೇತ್ರತ್ವದಲ್ಲಿ ವಿದ್ಯಾರ್ಥಿಗಳ ಮೂಲಕ ಉಳ್ಳಾಲ ರೇಂಜ್ ನಡೆಸಿದ ಈ ಕಾರ್ಯಕ್ರಮ ಯುವಕರಿಗೆ ಜಾಗ್ರತಿ ಮತ್ತು ಅರಿವು ಮೂಡಿಸುವಂತಹದ್ದು ಮತ್ತು ಸಮಾಜದ ಉನ್ನತಿಗೆ ಪೂರಕವಾದುದಾಗಿದೆ. ರಾಜ್ಯದಾದ್ಯಂತ ಮಾದಕ ವ್ಯಸನಗಳ ವಿರುದ್ಧ ಇಂತಹ ಜಾಗ್ರತಿ ಸಭೆಗಳು ಆಗುತ್ತಿರಬೇಕು ಎಂದು ಅವರು ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ರೇಂಜ್ ಅಧ್ಯಕ್ಷರಾದ ಜಲಾಲುದ್ದೀನ್ ಮದನಿ  ವಹಿಸಿದರು. ಎಸ್ ವೈ ಎಸ್ ದ.ಕ ಜಿಲ್ಲಾ ದಅವಾ ಕಾರ್ಯದರ್ಶಿ ಬಶೀರ್ ಮದನಿ ಕೂಳೂರು ಸಂದೇಶ ಭಾಷಣ ಮಾಡಿದರು. ರೇಂಜ್ ವೆಲ್ಫೇರ್ ವಿಭಾಗದ ಚೇರ್ಮಾನ್ ಯೂನುಸ್ ಇಮ್ದಾದಿ ಅಲ್ ಫುರ್ಖಾನಿ ಮತ್ತು ಉಳ್ಳಾಲ ನಗರ ಸಭೆ ಉಪಾಧ್ಯಕ್ಷರಾದ ಅಯ್ಯೂಬ್ ಮಂಚಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಿಷನರಿ ವಿಭಾಗದ ಕಾರ್ಯದರ್ಶಿ ಸೆರ್ಕಳ ಇಬ್ರಾಹಿಂ ಸಖಾಫಿ ಸ್ವಾಗತಿಸಿ, ಮ್ಯಾಗಝಿನ್ ವಿಭಾಗದ ಕಾರ್ಯದರ್ಶಿ ಅಯ್ಯೂಬ್ ಮಹ್ಳರಿ ಕಾರ್ಯಕ್ರಮ ನಿರೂಪಿಸಿದರು.

ಸಭೆಯಲ್ಲಿ ಉಳ್ಳಾಲ ರೇಂಜ್ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಫಾಳಿಲಿ, ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ,  ರೇಂಜ್ ನಾಯಕರಾದ ವಿ.ಎ ಸಖಾಫಿ ವಳವೂರು, ಕೆ.ಎಂ ಮದನಿ ಕಟ್ಟತ್ತಿಲ, ವಿ.ಕೆ ಸಖಾಫಿ ಮುಕ್ಕಚ್ಚೇರಿ, ನಝೀರ್ ಮದನಿ ಮಾರ್ಗತಲೆ, ಜಾಬಿರ್ ಫಾಳಿಲಿ, ನವಾಝ್ ಸಖಾಫಿ ಉಳ್ಳಾಲ, ಶಾಕಿರ್ ಸಖಾಫಿ ಉಳ್ಳಾಲ ಸಹಿತ ರೇಂಜ್ ಅಧೀನ ಮದ್ರಸಗಳ ಉಸ್ತಾದರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.