Skip to main content

SჄS&SSF ಆಲಂಪಾಡಿ ಯುನಿಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ


ಆಲಾಡಿ,ಸಜಿಪ ಮುನ್ನೂರು:SჄS&SSF ಆಲಂಪಾಡಿ ಯುನಿಟ್ ವತಿಯಿಂದ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಸಮ್ಮೇಳನ ಹಾಗೂ ದಾರುಲ್ ಅಶ್ ಅರಿಯ್ಯ ಸಮ್ಮೇಳನ ಪ್ರಚಾರಾರ್ಥ ಲೇಡಿಗೋಶನ್ ಆಸ್ಪತ್ರೆಯ ಸಹಯೋಗದೊಂದಿಗೆ SSF ಬ್ಲಡ್ ಸೈಬೋ ಕರ್ನಾಟಕ ಇದರ 306 ನೇ ರಕ್ತದಾನ ಶಿಬಿರ ಸೆಪ್ಟೆಂಬರ್ 3 ಆದಿತ್ಯವಾರ ಮರ್ಹೂಂ ಜೆಪ್ಪು ಹಸನಾಕ ಕಂಪೌಂಡ್ ಆಲಾಡಿಯಲ್ಲಿ ಸ್ಥಳಿಯ ಯುನಿಟ್ SSF ಅಧ್ಯಕ್ಷರಾದ ಅಬ್ದುಲ್ ಖಾದಿರ್ ಮುಸ್ಲಿಯಾರ್ ಉದ್ದೋಟುರವರ ಅಧ್ಯಕ್ಷತೆಯಲ್ಲಿ  ನಡೆಯಿತು.

ಅಕ್ಬರ್ ಅಲಿ ಮದನಿ ಸ್ವಾಗತಿಸಿದ ಸಭೆಯನ್ನು ಆಲಾಡಿ ಜುಮಾ ಮಸ್ಜಿದ್ ಖತೀಬ್ ಸಲೀಂ ಅರ್ಶದಿ ಅಲ್-ಅಸ್ಲಮಿ ಉಧ್ಘಾಟಿಸಿದರು.ದಾರುಲ್ ಅಶ್-ಅರಿಯ್ಯ ಜನರಲ್ ಮ್ಯಾನೇಜರ್ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯ ಮುಖ್ಯಪ್ರಭಾಷಣ ಮಾಡಿದರು.

ಸಭೆಯಲ್ಲಿ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್,ಆಲಾಡಿ ಜುಮಾ ಮಸ್ಜಿದ್ ಅಧ್ಯಕ್ಷರಾದ ಸಲೀಂ ಆಲಂಪಾಡಿ,ಮಲಾಯಿಬೆಟ್ಟು ಜುಮಾ ಮಸ್ಜಿದ್ ಅಧ್ಯಕ್ಷರಾದ ಯೂಸುಫ್ ಕರಂದಾಡಿ,ಕೊಳಕೆ ಜುಮಾ ಮಸ್ಜಿದ್ ಅಧ್ಯಕ್ಷರಾದ KP ಅಬ್ದುಲ್ಲಾ ಕೊಳಕೆ,ಕೊಪ್ಪಳ ಜುಮಾ ಮಸ್ಜಿದ್ ಖತೀಬರಾದ ಹಾರೀಸ್ ಹನೀಫಿ,ಕೊಳಕೆ ಜುಮಾ ಮಸ್ಜಿದ್ ಖತೀಬರಾದ ಬದ್ರುದ್ದೀನ್ ಅಹ್ಸನಿ,ಹಕೀಮಾಕ ಇಂದಿರಾ ನಗರ,SSF ಮಾಜಿ ಜಿಲ್ಲಾ ಅಧ್ಯಕ್ಷರಾದ ಇಬ್ರಾಹೀಂ ಸಖಾಫಿ ಸೆರ್ಕಳ SSF ಬಂಟ್ವಾಳ ಡಿವಿಷನ್ ಪ್ರ.ಕಾರ್ಯದರ್ಶಿ ಲುಕ್ಮಾನ್ ಮಾಸ್ಟರ್ ಕುಕ್ಕಾಜೆ ಶುಭ ಹಾರೈಸಿ ಮಾತನಾಡಿದರು.

ವೇದಿಕೆಯಲ್ಲಿ ಆಲಾಡಿ ಖುತುಬಿಯ್ಯತ್ ಕಮಿಟಿ ಅಧ್ಯಕ್ಷರಾದ ಇಬ್ರಾಹೀಂ ದುಬೈ,ಕೊಪ್ಪಳ ಜುಮಾ ಮಸ್ಜಿದ್ ಅಧ್ಯಕ್ಷರಾದ ಇಬ್ರಾಹೀಂ ಪೆರ್ವ,ಆಲಾಡಿ ಸಜಿಪ ಮುನ್ನೂರು ಶಾಲೆ SDMC ಅಧ್ಯಕ್ಷರಾದ ಮುಹಮ್ಮದ್ ಶರೀಫ್ ಇಂದಿರಾನಗರ,ಇಸ್ಮಾಯಿಲ್ ಮುಸ್ಲಿಯಾರ್ ಸಜಿಪ,ಕರ್ನಾಟಕ ಮುಸ್ಲಿಂ ಜಮಾಅತ್ ಸಜಿಪ ಸರ್ಕಲ್ ಅಧ್ಯಕರಾದ ಮುಹಮ್ಮದ್ ಕೊಳಕೆ,SჄS ಬಂಟ್ವಾಳ ಝೋನ್ ಸಾಂತ್ವನ ಕಾರ್ಯದರ್ಶಿ ಅಲ್ತಾಫ್ ಕೊಳಕೆ,ಆಲಂಪಾಡಿ SჄS ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಕೆ.ಬಿ,SSF ಮಾಜಿ ಜಿಲ್ಲಾ ಪ್ರ.ಕಾರ್ಯದರ್ಶಿ ಶರೀಫ್ ನಂದಾವರ,SSF ಮಾಜಿ ಜಿಲ್ಲಾ ನಾಯಕರಾದ ಅಸ್ಲಂ ಸಂಪಿಲ,SSF ದ.ಕ ಜಿಲ್ಲಾ ವೆಸ್ಟ್ ದಹ್ವಾ ಕಾರ್ಯದರ್ಶಿ ಮುಹಮ್ಮದ್ ಅಲಿ ಮದನಿ ಸೆರ್ಕಳ,SSF ಪಾಣೆಮಂಗಳೂರು ಸೆಕ್ಟರ್ ಅಧ್ಯಕ್ಷರಾದ ಫಾಮಿದ್ ಹನೀಫಿ ನಂದಾವರ ಹಾಗೂ 41 ರಕ್ತದಾನಿಗಳು ರಕ್ತ ನೀಡಿ ಸಹಕರಿಸಿದರು.ಕೊನೆಯಲ್ಲಿ ಲೇಡಿಗೋಶನ್ ಆಸ್ಪತ್ರೆಗೆ ಯುನಿಟ್ ವತಿಯಿಂದ ಸ್ಮರಣಿಕೆ ನೀಡಲಾಯಿತು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.