Skip to main content

Posts

Showing posts from May, 2025

ಮಹಾ ಮಳೆ : 68 ಆಡು, ಕುರಿಗಳ ಸಾವು

ಉಳ್ಳಾಲ : ನಿನ್ನೆ ರಾತ್ರಿ ಸುರಿದ ಮಹಾಮಳೆಯಿಂದ ತಲಪಾಡಿ ಸಮೀಪದ ಕೆಸಿ ರೋಡ್ ಮಟನ್ ಯಾಕೂಬ್ ರವರ 68 ಆಡು, ಕುರಿಗಳು ಸಾವಿಗೀಡಾಗಿದ್ದು, ಅಪಾರ ನಷ್ಟ ಉಂಟಾಗಿದೆ. ಆಡಿನ ಶೆಡ್ಡಿನೊಳಗೆ ನಿರಂತರ ಸುರಿದ ಮಳೆಯಿಂದ ನೆರೆ ನೀರು ನುಗ್ಗಿದ್ದು, ಆಡು, ಕುರಿಗಳೆಲ್ಲವೂ ನೀರಿನಲ್ಲಿ ಕೊಚ್ಚಿಹೋಗಿದೆ. 23 ಆಡು, ಕುರಿಗಳು ಪತ್ತೆಯಾಗಿದ್ದು, ಹೊಂಡ ತೆಗೆದು ಹೂಳಲಾಗಿದೆ.

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್ ಜೆ ಎಂ ಉಳ್ಳಾಲ ರೇಂಜ್ ಮಹಾಸಭೆ

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್  ಎಸ್ ಜೆ ಎಂ ಉಳ್ಳಾಲ ರೇಂಜ್ ಮಹಾಸಭೆಯು ಆಝಾದ್ ನಗರದ ಅನ್ವಾರುಲ್ ಉಲೂಂ ಮದ್ರಸ ಆಡಿಟೋರಿಯಂ ನಲ್ಲಿ ನಡೆಯಿತು. ಆಝಾದ್ ನಗರ ಮಸೀದಿಯ ಖತೀಬರಾದ ಅಬ್ದುಸ್ಸಮದ್ ಅಹ್ಸನಿ ದುಆ ನೆರವೇರಿಸಿದರು. ರೇಂಜ್ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಫಾಳಿಲಿ ಸ್ವಾಗತಿಸಿದರು. ರೇಂಜ್ ಸಹಾಯಕ ಕಾರ್ಯದರ್ಶಿ ಇರ್ಫಾನ್ ಸಅದಿ ಅಳೇಕಲ ಖಿರಾಅತ್ ಪಠಿಸಿದರು.  ಎಸ್ ಜೆ ಎಂ ಉಳ್ಳಾಲ ರೇಂಜ್ ಹಾಗು ಉಳ್ಳಾಲ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನಲ್ ಟ್ರಸ್ಟ್ ಮುಫತ್ತಿಶರಾದ ಹುಸೈನ್ ಸಅದಿ ಹೊಸ್ಮಾರ್ ಸಭೆಯನ್ನು ಉದ್ಘಾಟಿಸಿ, ಮಾತನಾಡಿ ಮುಅಲ್ಲಿಮರ ಸೇವಾವಧಿಯು ಅತ್ಯಂತ ಅಮೂಲ್ಯವಾಗಿದ್ದು, ಸಂಪೂರ್ಣವಾಗಿ ಈ ಸಮಯವನ್ನು ನೂತನ ವಿಧಾನಗಳ ಮೂಲಕ ವಿದ್ಯಾರ್ಥಿಗಳ ಕಲಿಕಾಭಿವೃದ್ಧಿಗೆ ಮೀಸಲಿರಿಸಬೇಕು ಎಂದು ತಿಳಿಸಿದರು.  ರೇಂಜ್ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಫಾಳಿಲಿ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ ಲೆಕ್ಕಪತ್ರ ಮಂಡಿಸಿದರು. ನವಾಝ್ ಸಖಾಫಿ ಉಳ್ಳಾಲ ಪರೀಕ್ಷಾ ಹಾಗು ವೆಲ್ಫೇರ್ ವರದಿಯನ್ನು ಮಂಡಿಸಿದರು. ರೇಂಜ್ ಅಧ್ಯಕ್ಷರಾದ ಜಲಾಲುದ್ದೀನ್ ಮದನಿ ಉಳ್ಳಾಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  2024-25 ನೇ ಸಾಲಿನ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಗಳಿಗೆ ಪ್ರೋತ್...