Skip to main content

ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಎಸ್ ಜೆ ಎಂ ಉಳ್ಳಾಲ ರೇಂಜ್ ಮಹಾಸಭೆ


ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್  ಎಸ್ ಜೆ ಎಂ ಉಳ್ಳಾಲ ರೇಂಜ್ ಮಹಾಸಭೆಯು ಆಝಾದ್ ನಗರದ ಅನ್ವಾರುಲ್ ಉಲೂಂ ಮದ್ರಸ ಆಡಿಟೋರಿಯಂ ನಲ್ಲಿ ನಡೆಯಿತು.
ಆಝಾದ್ ನಗರ ಮಸೀದಿಯ ಖತೀಬರಾದ ಅಬ್ದುಸ್ಸಮದ್ ಅಹ್ಸನಿ ದುಆ ನೆರವೇರಿಸಿದರು. ರೇಂಜ್ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಫಾಳಿಲಿ ಸ್ವಾಗತಿಸಿದರು. ರೇಂಜ್ ಸಹಾಯಕ ಕಾರ್ಯದರ್ಶಿ ಇರ್ಫಾನ್ ಸಅದಿ ಅಳೇಕಲ ಖಿರಾಅತ್ ಪಠಿಸಿದರು.

 ಎಸ್ ಜೆ ಎಂ ಉಳ್ಳಾಲ ರೇಂಜ್ ಹಾಗು ಉಳ್ಳಾಲ ಸಯ್ಯಿದ್ ಮದನಿ ಅರೆಬಿಕ್ ಎಜ್ಯುಕೇಶನಲ್ ಟ್ರಸ್ಟ್ ಮುಫತ್ತಿಶರಾದ ಹುಸೈನ್ ಸಅದಿ ಹೊಸ್ಮಾರ್ ಸಭೆಯನ್ನು ಉದ್ಘಾಟಿಸಿ, ಮಾತನಾಡಿ ಮುಅಲ್ಲಿಮರ ಸೇವಾವಧಿಯು ಅತ್ಯಂತ ಅಮೂಲ್ಯವಾಗಿದ್ದು, ಸಂಪೂರ್ಣವಾಗಿ ಈ ಸಮಯವನ್ನು ನೂತನ ವಿಧಾನಗಳ ಮೂಲಕ ವಿದ್ಯಾರ್ಥಿಗಳ ಕಲಿಕಾಭಿವೃದ್ಧಿಗೆ ಮೀಸಲಿರಿಸಬೇಕು ಎಂದು ತಿಳಿಸಿದರು. 

ರೇಂಜ್ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಫಾಳಿಲಿ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಬಶೀರ್ ಸಖಾಫಿ ಉಳ್ಳಾಲ ಲೆಕ್ಕಪತ್ರ ಮಂಡಿಸಿದರು. ನವಾಝ್ ಸಖಾಫಿ ಉಳ್ಳಾಲ ಪರೀಕ್ಷಾ ಹಾಗು ವೆಲ್ಫೇರ್ ವರದಿಯನ್ನು ಮಂಡಿಸಿದರು.

ರೇಂಜ್ ಅಧ್ಯಕ್ಷರಾದ ಜಲಾಲುದ್ದೀನ್ ಮದನಿ ಉಳ್ಳಾಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
2024-25 ನೇ ಸಾಲಿನ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ರೇಂಜ್ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. 

ಚುನಾವಣಾ ವೀಕ್ಷಕರಾಗಿ ಆಗಮಿಸಿದ ಎಸ್ ಜೆ ಎಂ ವೆಸ್ಟ್ ಜಿಲ್ಲಾಧ್ಯಕ್ಷರಾದ ಅಬೂಬಕರ್ ಮುಸ್ಲಿಯಾರ್ ಕುಕ್ಕಾಜೆ ಎಸ್ ಜೆ ಎಂ ಉಳ್ಳಾಲ ರೇಂಜಿನ ಹಾಲಿ ಸಮಿತಿಯನ್ನು ವಿಸರ್ಜಿಸಿ, ನೂತನ ಸಮಿತಿ ಆಯ್ಕೆ ಪ್ರಕ್ರಿಯೆಗೆ ನೇತೃತ್ವ ವಹಿಸಿದರು. 

ಉಳ್ಳಾಲ ರೇಂಜ್ ನೂತನಾಧ್ಯಕ್ಷರಾಗಿ ಜಲಾಲುದ್ದೀನ್ ಮದನಿ ಪುನರಾಯ್ಕೆಯಾದರು. ನವಾಝ್ ಸಖಾಫಿ ಉಳ್ಳಾಲ ಪ್ರಧಾನ ಕಾರ್ಯದರ್ಶಿಯಾಗಿ, ವಿ ಎ ಮುಹಮ್ಮದ್ ಸಖಾಫಿ ಉಳ್ಳಾಲ ಕೋಶಾಧಿಕಾರಿಯಾಗಿ ಆಯ್ಕೆಯಾದರು. ಐಟಿ, ಎಕ್ಸಾಂ, ವೆಲ್ಫೇರ್ ಉಪಾಧ್ಯಕ್ಷರಾಗಿ ಕೆ ಎಂ ಮುಹ್ಯಿದ್ದೀನ್ ಮದನಿ ಕಟ್ಟತ್ತಿಲ, ಕಾರ್ಯದರ್ಶಿಯಾಗಿ ಇರ್ಫಾನ್ ಫಾಳಿಲಿ ಅಲ್ ಹಿಕಮಿ, ಟ್ರೈನಿಂಗ್ ಮತ್ತು ಮಿಷನರಿ ಉಪಾಧ್ಯಕ್ಷರಾಗಿ ಯೂನುಸ್ ಇಮ್ದಾದಿ ಅಲ್ ಫುರ್ಖಾನಿ, ಕಾರ್ಯದರ್ಶಿಯಾಗಿ ಬಶೀರ್ ಸಖಾಫಿ ಉಳ್ಳಾಲ, ಮ್ಯಾಗಝಿನ್ ವಿಭಾಗದ ಉಪಾಧ್ಯಕ್ಷರಾಗಿ ಎನ್ ಡಿ ಮದನಿ ಬೋಳಂತೂರು, ಕಾರ್ಯದರ್ಶಿಯಾಗಿ ಸೆರ್ಕಳ ಇಬ್ರಾಹಿಂ ಸಖಾಫಿ, ಪಿಂಚಣಿ ಉಪಾಧ್ಯಕ್ಷರಾಗಿ ಅಬ್ಬಾಸ್ ಮದನಿ ಬಂಡಾಡಿ, ಕಾರ್ಯದರ್ಶಿಯಾಗಿ ಅಬ್ದುರ್ರಝ್ಝಾಖ್ ಮದನಿ ದಾರಂದಬಾಗಿಲು ಆಯ್ಕೆಯಾದರು.
ಮತ್ತು ಹತ್ತು ಕಾರ್ಯಕಾರಿಣಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ರೇಂಜ್ ನೂತನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ಧನ್ಯವಾದಗೈದರು.

Comments

Popular posts from this blog

ಇಂದು ಸೆರ್ಕಳ ಗೋಲ್ಡನ್ ಫಿಫ್ಟಿ ಸಮಾರೋಪ ಸಮಾರಂಭ.ನೇತೃತ್ವ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿ ಸೆರ್ಕಳ ಇದರ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇಂದು (ಎಪ್ರಿಲ್ 13) ಸೋಮವಾರ ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮ ಕಾರ್ಯದರ್ಶಿ ಅಸ್ಸಯ್ಯಿದ್ ಬದ್ರುಸ್ಸದಾತ್ ಖಲೀಲ್ ಬುಖಾರಿ ತಂಙಳ್ ಕಡಲುಂಡಿ ಆತ್ಮೀಯ ಸಂಗಮ ಕಾರ್ಯಕ್ರಮಕ್ಕೆ ನೇತೃತ್ವ ನೀಡಲಿದ್ದಾರೆ.ಉಮರ್ ಸಖಾಫಿ ಪಳ್ಳತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ರಾಜ್ಯ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷರಾದ ಶಾಫಿ ಸಅದಿ ಬೆಂಗಳೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.10 ಗಂಟೆಗೆ ಉಲಮಾ ಸಂಗಮ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಶೈಖುನಾ ವಾಲೆಮುಂಡೊವು ಉಸ್ತಾದ್ ನೇತೃತ್ವದಲ್ಲಿ ನಡೆಯಲಿದೆ.ಸಂಜೆ 5 ಗಂಟೆಗೆ ಬದ್ರ್ ಮೌಲಿದ್ ಮಜ್ಲಿಸ್ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ನೇತೃತ್ವ ವಹಿಸಲಿದ್ದಾರೆ.ಹಾಗೂ ಇನ್ನಿತರ ಉಲಮಾ ಸಾದಾತ್ ಗಳು, ರಾಜಕೀಯ,ಸಾಮಾಜಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ  ಎಂದು ಸ್ವಾಗತ ಸಮಿತಿ ಚಯರ್ ಮೆನ್ ಸಿ.ಎಚ್ ಅಬ್...

ಆಧ್ಯಾತ್ಮಿಕತೆ ಮೈಗೂಡಿಸಿಕೊಳ್ಳಲು ಕೆ.ಸಿ. ಉಸ್ತಾದ್ ಕರೆ.

ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ.    ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು. ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ  ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗ...

ಗೋಲ್ಡನ್ ಫಿಫ್ಟಿ ಪ್ರಯುಕ್ತ ಇಂದು ಸೆರ್ಕಳದಲ್ಲಿ ಮುಖ್ಯ ಪ್ರಭಾಷಣ ಶೈಖುನಾ ಪೇರೋಡ್ ಉಸ್ತಾದ್

ಬೋಳಂತೂರು:ಕೊಳ್ನಾಡು ಗ್ರಾಮದ ಸೆರ್ಕಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ನುಸ್ರತುಲ್ ಇಸ್ಲಾಂ ಬದ್ರ್ ಕಮಿಟಿಯ 50 ನೇ ವಾರ್ಷಿಕ ಪ್ರಯುಕ್ತ ನಡೆಯುವ ಗೋಲ್ಡನ್ ಫಿಫ್ಟಿ ಕಾರ್ಯಕ್ರಮ ಇಂದು(ಎಪ್ರಿಲ್ 12) ಮಗ್ರಿಬ್ ನಮಾಝ್ ಬಳಿಕ ಸೆರ್ಕಳ ತಾಜುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.ಇಂದು ಸಂಜೆ ಅಸರ್ ನಮಾಝ್ ಬಳಿಕ ಮಸೀದಿ ಅಧ್ಯಕ್ಷರಾದ ಎಸ್.ಬಿ ಅಬೂಬಕ್ಕರ್ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ. ಮಗ್ರಿಬ್ ನಮಾಝ್ ಬಳಿಕ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.ಕರ್ನಾಟಕ ದಿವಾನ್-ಇ-ಖಾಝಿ ಕರ್ನಾಟಕ ಇದರ ಅಧ್ಯಕ್ಷರಾದ ಅಸ್ಸಯ್ಯಿದ್ ಮುಶ್ತಾಖುರ್ರಹ್ಮಾನ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮ ಬದ್ರ್ ಕಮಿಟಿ ಅಧ್ಯಕ್ಷರಾದ ಉಸ್ಮಾನ್ ಎಸ್.ಬಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವಿನರ್ ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.