ಮಂಗಳೂರು: ಮಾನವೀಯತೆ ಮೈಗೂಡಿಸಿಕೊಂಡವರು ಮಾತ್ರ ನಿಜವಾದ ಮಾನವರಾಗಿ ಬದುಕಲು ಸಾಧ್ಯ. ಮಾನವರು ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆಯಿಂದ ಬಾಳಬೇಕು. ಮಾನವೀಯತೆ ಎಂಬುವುದು ಆಧ್ಯಾತ್ಮಿಕತೆಯ ಒಂದು ಭಾಗ. ದ್ವೇಷ, ಕಲಹ, ಕಳಂಕವಿಲ್ಲದ ಶುದ್ಧ ಹೃದಯದ, ಆತ್ಮೀಯ ಅನುಭೂತಿ ಮೈಗೂಡಿಸಿಕೊಂಡ ಮಾನವರು ನಾವಾಗಬೇಕು. ಎಂದು ಶೈಖುಲ್ ಹದೀಸ್ ಕೆ.ಸಿ. ಉಸ್ತಾದ್ ಕರೆ ನೀಡಿದರು.
ಅವರು ಮಂಗಳೂರು ಹರೇಕಳ ತ್ವೈಬಾ ಮದೀನ ಎಜು ಪಾರ್ಕ್ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಲತ್ವೀಫಿ ಸಂಗಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಪ್ರಸ್ತುತ ಸಭೆಯಲ್ಲಿ ಲತ್ವೀಫೀಸ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ಅಬೂಬಕರ್ ಲತ್ವೀಫಿ ಎಣ್ಮೂರು, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕರ್ ಲತ್ವೀಫಿ ಬೇಂಗಿಲ, ಕೋಶಾಧಿಕಾರಿಯಾಗಿ ಅಬ್ದುಲ್ ಅಝೀಝ್ ಲತ್ವೀಫಿ ಸಬರಬೈಲು, ಉಪಾಧ್ಯಕ್ಷರುಗಳಾಗಿ ಅಬ್ದುಲ್ ಹಮೀದ್ ಲತ್ವೀಫಿ ಸೇರಾಜೆ, ಯಾಕೂಬ್ ಲತ್ವೀಫಿ ಅಮ್ಟೂರು. ಜೊತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರಝಾಕ್ ಲತ್ವೀಫಿ ಸರಳಿಕಟ್ಟೆ, ಅಬ್ದುಲ್ ರಝಾಕ್ ಲತ್ವೀಫಿ ಕುಂತೂರು, ಮುಹಮ್ಮದ್ ರಫೀಕ್ ಲತ್ವೀಫಿ ತೆಕ್ಕಾರು. ಕೋರ್ಡಿನೇಟರಾಗಿ ಅಬ್ದುಲ್ ಕರೀಂ ಲತ್ವೀಫಿ ಬೇಂಗಿಲ, ಸಮಿತಿ ಸದಸ್ಯರುಗಳಾಗಿ ಮುಹಮ್ಮದ್ ರಫೀಕ್ ಲತ್ವೀಫಿ ಕೊಡಗು,ಝಕರಿಯ್ಯ ಲತ್ವೀಫಿ ಕಳಂಜಿಬೈಲು, ದಾವೂದ್ ಲತ್ವೀಫಿ ಕೊಕ್ಕಡ, ಇಸ್ಮಾಯಿಲ್ ಲತ್ವೀಫಿ ಕೊಕ್ಕಡ, ಅಬ್ದುಲ್ ರಹ್ಮಾನ್ ಲತ್ವೀಫಿ ಚಂದಹಿತ್ಲು, ಅಬ್ದುಲ್ ರಹ್ಮಾನ್ ಲತ್ವೀಫಿ ಕನ್ಯಾನ, ಮುನೀರ್ ಲತ್ವೀಫಿ ಸುರಿಬೈಲು, ಅಶ್ರಫ್ ಲತ್ವೀಫಿ ಬೇಂಗಿಲ, ಶರೀಫ್ ಲತ್ವೀಫಿ ಬೋವು, ರಫೀಕ್ ಲತ್ವೀಫಿ ಬೊಳ್ಮಾರ್, ಶರೀಫ್ ಲತ್ವೀಫಿ ಬೊಳ್ಮಾರ್ ಇವರುಗಳನ್ನು ಆರಿಸಲಾಯಿತು.
ಅಬೂಬಕರ್ ಲತ್ವೀಫಿ ಬೇಂಗಿಲ ಸ್ವಾಗತಿಸಿ ಅಬ್ದುಲ್ ರಹಿಮಾನ್ ಲತ್ವೀಫಿ ಚಂದಹಿತ್ಲು ವಂದಿಸಿದರು.
Comments
Post a Comment